ಸ್ವಂತ ಮಗುವಿನ ರೀತಿ ಮರಿಯಾನೆ ಸಲಹುತ್ತಿರುವ ಕಾವಾಡಿ ದಂಪತಿ: ಬಂಡೀಪುರದಿಂದ ತಾಯಿಯಿಂದ ಬೇರ್ಪಟ್ಟಿರುವ ಮರಿಆನೆ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ರಾಂಪುರ ಆನೆ ಶಿಬಿರದ ಕಾವಾಡಿ ರಾಜು ಮತ್ತು ರಮ್ಯಾಗೆ ‘ವೇದಾ’ ಮೊದಲನೇ ಹೆಣ್ಣು ಮಗಳು. ಈ ವೇದಾ ಮತ್ಯಾರೂ ಅಲ್ಲ. ಕಳೆದ ಏಳು ತಿಂಗಳ ಹಿಂದೆ ನುಗು ವಲಯದ ಅರಣ್ಯದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ 7 ತಿಂಗಳ ಹೆಣ್ಣು ಆನೆಮರಿ. ಕೆಲವೇ ವರ್ಷಗಳ ಹಿಂದೆ ವಿವಾಹವಾಗಿರುವ ರಾಜು ಮತ್ತು ರಮ್ಯಾ ಅವರ ಮಡಿಲು ಸೇರಿರುವ ವೇದಾಗೆ ಮೊದಲ ಮಗುವಿನ ಪಾಲನೆಯ ಅನುಭವ ನೀಡುತ್ತಿದ್ದಾಳೆ.ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಗೆದ್ದ […]