ಗಡಿಜಿಲ್ಲೆ ಚಾಮರಾಜನಗರದಲ್ಲಿ ಬಾಗಿಲು ಮುಚ್ಚುವ ಹಂತ ತಲುಪಿದ 13 ಸರ್ಕಾರಿ ಶಾಲೆಗಳು

ಚಾಮರಾಜನಗರ: 2023-24ನೇ ಶೈಕ್ಷಣಿಕ ಸಾಲಿನಲ್ಲಿ ಮೂಲಸೌಕರ್ಯ ಕೊರತೆ, ಶಿಕ್ಷಕರ ಕೊರತೆ, ಶಿಥಿಲ ಶಾಲಾ ಕಟ್ಟಡಗಳಿಂದ ಆತಂಕಗೊಂಡು ಮಕ್ಕಳ ಶೂನ್ಯ ದಾಖಲಾತಿಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಲಾಗಿದೆ.ಮೂಲಸೌಕರ್ಯದ ಕೊರತೆಯಿಂದಾಗಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಲವು ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತ ತಲುಪಿವೆ. ಈ ಪೈಕಿ ಒಂದು ಉರ್ದು ಮಾಧ್ಯಮದ ಶಾಲೆಯೂ ಸೇರಿದೆ.ಅಗತ್ಯ ಮೂಲಸೌಕರ್ಯ, ಶಿಕ್ಷಕರ ಕೊರತೆ, ಶಿಥಿಲ ಶಾಲಾ ಕಟ್ಟಡಗಳೇ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಉಂಟಾಗಲು ಕಾರಣವಾಗಿವೆ. ಕೋವಿಡ್ ವೇಳೆ […]