ಹೆಬ್ರಿ: ಸಾಹಿತಿ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ಸೀಮಾ ಕಾಮತ್ ಕಾಕ೯ಳ ಇವರಿಗೆ ಚಾಣಕ್ಯ ಅತ್ಯುತ್ತಮ ಶಿಕ್ಷಕ- 2023 ಪ್ರಶಸ್ತಿ
ಹೆಬ್ರಿ: ಸಮಾಜದ ಭದ್ರ ಬುನಾದಿಗೆ ಶಿಕ್ಷಣ ಕಾರಣವಾದರೆ, ಶಿಕ್ಷಕರು ಈ ಸಮಾಜದ ಆಸ್ತಿಯಾಗಿದ್ದು ವಿದ್ಯಾರ್ಥಿಯ ಸರ್ವತೋಮುಖ ಬದಲಾವಣೆಯ ಹರಿಕಾರರಾಗಿದ್ದಾರೆ. ನಾಲ್ಕು ಗೋಡೆಗಳ ಒಳಗೆ ಸೀಮಿತವಾದ ಪಠ್ಯ ಕ್ರಮ ಹೊರತು ಪಡಿಸಿ, ವಿಭಿನ್ನವಾಗಿ ಯೋಚಿಸುವ ಭವಿಷ್ಯದ ಪ್ರಜೆಗಳನ್ನು ತಯಾರು ಮಾಡುವ ಶಿಕ್ಷಕರ ಪಾತ್ರ ಮಹತ್ತರವಾದದ್ದು ಎಂದು ಅವಿಭಜಿತ ಜಿಲ್ಲೆಯ ಜವಳಿ ವತ೯ಕರ ಸಂಘದ ಅಧ್ಯಕ್ಷ ಯೋಗೀಶ್ ಭಟ್ ಹೇಳಿದರು. ಅವರು ಸೆ.5ರಂದು ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಾಡಿನ ಹೆಸರಾಂತ ಸಾಹಿತಿ […]
ಕಾರ್ಕಳ: ಬಹುಮುಖ ಪ್ರತಿಭೆಯ ಶಿಕ್ಷಕಿ ಸೀಮಾ ಕಾಮತ್ ಅವರಿಗೆ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಕಾರ್ಕಳ: ನಿವೃತ್ತ ಶಿಕ್ಷಕ ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಕಾರ್ಕಳ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಬಹುಮುಖ ಪ್ರತಿಭೆ ಸೀಮಾ ಕಾಮತ್ ಅವರು ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯ ಶಿಕ್ಷಕಿ ಸೀಮಾ […]
ಹೆಬ್ರಿ: ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಗೆ ಶಿಬಿರಕ್ಕೆ ಚಾಲನೆ
ಹೆಬ್ರಿ: ಮೊಬೈಲ್ ಹಾಗೂ ಟಿವಿ ನೋಡುತ್ತಾ ರಜಾ ಸಮಯದಲ್ಲಿ ಕಾಲಹರಣ ಮಾಡುವ ಬದಲು, ಬದುಕು ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಇಂತಹ ವೈವಿಧ್ಯಮಯ ಬೇಸಗೆ ಶಿಬಿರದಲ್ಲಿ ಮಕ್ಕಳನ್ನು ಸೇರಿಸಿ ಎಂದು ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿ.ಕರುಣಾಕರ ಶೆಟ್ಟಿ ಹೇಳಿದರು. ಅವರು ಚಾಣಕ್ಯ ಎಜುಕೇಷನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಏ.26ರ ವರೆಗೆ ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ನಡೆಯುತ್ತಿರುವ ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಗೆ ಶಿಬಿರವನ್ನು ಉದ್ಘಾಟಿಸಿ […]
ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬಲ್ಲಾಡಿ ಚಂದ್ರಶೇಖರ ಭಟ್ ಆಯ್ಕೆ
ಹೆಬ್ರಿ : ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಣ, ಸಾಹಿತ್ಯ, ಸಂಘಟನೆ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಪರಿಗಣಿಸಿ ಕೊಡಮಾಡುವ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022 ಈ ಬಾರಿ ಮುದ್ರಾಡಿ ಪ್ರೌಢ ಶಾಲೆಯ ಆಂಗ್ಲಭಾಷಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಅವರಿಗೆ ಲಭಿಸಿದೆ. ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಸೆ.5 ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ […]