ಜು.16: ಚಂದ್ರಗ್ರಹಣ ಹಿನ್ನಲೆ ದೇವಸ್ಥಾನಗಳಲ್ಲಿ ದಿನನಿತ್ಯದ ಪೂಜೆಯಲ್ಲಿ ವ್ಯತ್ಯಾಸ 

ಮಂಗಳೂರು: ಜು.16ರಂದು‌ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕರಾವಳಿಯ ಪುಣ್ಯ ಕ್ಷೇತ್ರದಲ್ಲಿ ದಿನನಿತ್ಯದ ‌ಪೂಜೆಯಲ್ಲಿ ವ್ಯತ್ಯಾಸ ಉಂಟಾಗಲಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ರಾತ್ರಿ 7ಕ್ಕೆ ನಡೆಯುವ ಮಹಾಪೂಜೆ, ಸಂಜೆ 6.30ಕ್ಕೆ ನಡೆಯಲಿದೆ. ಸಂಜೆ ಆಶ್ಲೇಷಾ ಬಲಿ ಸೇವೆ, ರಾತ್ರಿಯ ಭೋಜನ ವ್ಯವಸ್ಥೆ ಇರುವುದಿಲ್ಲ. ಅಲ್ಲದೇ 7 ಗಂಟೆಯ ಅನಂತರ ದೇವಸ್ಥಾನ ಪ್ರವೇಶಿವಿಲ್ಲ. ಆದರೆ ಬೆಳಗ್ಗಿನಿಂದ ಮಧ್ಯಾಹದ ವರೆಗಿನ ಪೂಜಾ ಅವಧಿ ಮತ್ತು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರಾತ್ರಿ ಹೂವಿನ ಪೂಜೆ, ರಂಗಪೂಜೆ ಹಾಗೂ […]