ಸರಳವಾಸ್ತು ಚಂದ್ರಶೇಖರ್ ಗುರೂಜಿ ಹತ್ಯೆ: ಹಂತಕರು ಪೊಲೀಸ್ ಬಲೆಗೆ

ಹುಬ್ಬಳ್ಳಿ: ಮಂಗಳವಾರ ಹುಬ್ಬಳ್ಳಿಯ ಹೋಟೆಲ್‌ವೊಂದರಲ್ಲಿ ವಾಸ್ತು ತಜ್ಞ ಚಂದ್ರಶೇಖರ ಅಂಗಡಿ (ಚಂದ್ರಶೇಖರ ಗುರೂಜಿ) ಅವರನ್ನು ಚಾಕುವಿನಿಂದ ಇರಿದು ಕೊಂದ ಇಬ್ಬರು ಹಂತಕರನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ರಾಮದುರ್ಗದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಮಹಾಂತೇಶ ಶಿರೂರು ಮತ್ತು ಮಂಜುನಾಥ ಮರೆವಾಡ, ಚಂದ್ರಶೇಖರ ಗುರೂಜಿ ನಡೆಸುತ್ತಿದ್ದ ಸರಳ ವಾಸ್ತುವಿನ ಮಾಜಿ ಉದ್ಯೋಗಿಗಳಾಗಿದ್ದು, ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಬೆಳಗಾವಿ ಪೊಲೀಸರ ಸಹಾಯದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಇಬ್ಬರೂ ಆರೋಪಿಗಳು ಮಂಗಳವಾರ ಮಧ್ಯಾಹ್ನ ಚಂದ್ರಶೇಖರ ಗುರೂಜಿ […]

ಖ್ಯಾತ ವಾಸ್ತು ತಜ್ಞ, ಚಂದ್ರಶೇಖರ್ ಗುರೂಜಿ ನಿರ್ಮಮ ಹತ್ಯೆ: 60 ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆ ಮಾಡಿ ಹಂತಕರು ಪರಾರಿ

ಹುಬ್ಬಳ್ಳಿ: ಸರಳ ವಾಸ್ತು ಮೂಲಕ ಜನಪ್ರಿಯರಾಗಿದ್ದ ಖ್ಯಾತ ವಾಸ್ತು ತಜ್ಞ ಚಂದ್ರಶೇಖರ್‌ ಗುರೂಜಿ ಅವರನ್ನು ಹುಬ್ಬಳ್ಳಿಯ ಹೋಟೆಲ್‌ನಲ್ಲಿ ನಿರ್ಮಮವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಉಣಕಲ್‌ ಕೆರೆ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಭಕ್ತರ ಸೋಗಿನಲ್ಲಿ ಬಂದ ಹಂತಕರು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈಗ ಕೃತ್ಯದ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು ಕೊಲೆಯ ಘೋರತೆ ಅನಾವರಣಗೊಂಡಿದೆ. ಇಬ್ಬರು ವ್ಯಕ್ತಿಗಳು ಹೋಟೆಲ್‌ ಲಾಬಿಯಲ್ಲಿ ಕುಳಿತಿದ್ದ ಚಂದ್ರಶೇಖರ್‌ ಗುರೂಜಿಯ ಆಶೀರ್ವಾದ ಪಡೆಯುವಂತೆ ಬಂದು, ಇದ್ದಕ್ಕಿದ್ದಂತೆ ಇಬ್ಬರೂ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿ […]