ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಕುಸಿದ ಲಾರಿ; ಚಾಲಕ ಹಾಗೂ ಕ್ಲೀನರ್ ಸುರಕ್ಷಿತ
ಚಿಕ್ಕಮಗಳೂರು: ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿ ಸಾಗಿಸುತ್ತಿದ್ದ ಲಾರಿ ಘಾಟಿಯಲ್ಲಿ ಉರುಳಿ ಬಿದ್ದ ಘಟನೆ ವರದಿಯಾಗಿದೆ. ಜಿಲ್ಲೆಯ ಸೋಮನಕಾಡು ಬಳಿ ಲಾರಿಯು 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯರು ಧಾವಿಸಿ ಲಾರಿಯನ್ನು ಮೇಲೆತ್ತುವ ಕಾರ್ಯಾಚರಣೆ ನಡೆಸಿದ್ದಾರೆ ಎಂದು ವರದಿಯಾಗಿದೆ.