ಛತ್ರಪತಿ ಶಿವಾಜಿ ಆಡಳಿತ ಕೌಶಲ್ಯ ಎಲ್ಲರಿಗೂ ಮಾದರಿ: ವೀಣಾ. ಬಿ.ಎನ್
ಉಡುಪಿ: ಛತ್ರಪತಿ ಶಿವಾಜಿ ಮಹಾರಾಜರು ತಮ್ಮ ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸಿಕೊಂಡಿದ್ದ ಕೌಶಲ್ಯಗಳನ್ನು ಇಂದಿನ ಆಡಳಿತ ವ್ಯವಸ್ಥೆಯಲ್ಲಿಯೂ ಬಳಸಿಕೊಳ್ಳುವುದರ ಮೂಲಕ ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡಲು ಸಾಧ್ಯವಾಗಲಿದ್ದು ಅವರ ಆಡಳಿತ ಕೌಶಲ್ಯ ಸದಾ ಮಾದರಿಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದರು. ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಶಿವಾಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. […]