ಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ
ಉಡುಪಿ: ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದ ಪೂರ್ವ ಭಾವಿ ಸಭೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಅಧ್ಯಕ್ಷತೆಯಲ್ಲಿ ಜರಗಿತು. ಫೆ.19 ಸೋಮವಾರದಂದು ಸರಕಾರಿ ಬಾಲಕಿಯರ ಪ್ರೌಢ ಶಾಲಾ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲು ನಿರ್ಣಯಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಛತ್ರಪತಿ ಶಿವಾಜಿ ವಿವಿದೊದ್ದೇಶ ಸಹಕಾರ ಸಂಘದ ಅಧ್ಯಕ್ಷ ದಿನೇಶ್ ಸಿ ನಾಯ್ಕ್, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಶಿರೂರು, ನಿರ್ದೇಶಕರಾದ ಆರ್ ಸಿ ನಾಯ್ಕ್, […]