ಛತ್ರಪತಿ ಶಿವಾಜಿಯ ಜೀವನಾದರ್ಶಗಳನ್ನು ಮೈಗೂಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಕರೆ

ಉಡುಪಿ: ಛತ್ರಪತಿ ಶಿವಾಜಿಯ ಆದರ್ಶ, ಶಿಸ್ತು ಹಾಗೂ ದೇಶಾಭಿಮಾನವನ್ನು ವಿದ್ಯಾರ್ಥಿಗಳು ಮೈಗೂಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ ನೀಡಿದರು. ಅವರು ಸೋಮವಾರದಂದು ನಗರದ ಸರಕಾರಿ ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತು (ರಿ) ಹಾಗೂ ಛತ್ರಪತಿ ಶಿವಾಜಿ ವಿವಿದ್ದೋದೇಶ ಸಹಕಾರ ಸಂಘ (ರಿ.) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ತಾಯಿಯ ಪ್ರೇರಣೆಯಿಂದ ಉತ್ತಮ ವ್ಯಕ್ತಿತ್ವವನ್ನು ಮೈಗೊಡಿಸಿಕೊಂಡ ಶಿವಾಜಿಯು […]