ಎಗ್ಮೋರ್​ ನ್ಯಾಯಾಲಯದಿಂದ ಖ್ಯಾತ ನಟಿ ಜಯಪ್ರದಾಗೆ 6 ತಿಂಗಳ ಶಿಕ್ಷೆ

ಚೆನ್ನೈ, ತಮಿಳುನಾಡು: ಕಾರ್ಮಿಕ ಸರ್ಕಾರಿ ವಿಮಾ ನಿಗಮವು ಚೆನ್ನೈನ ಎಗ್ಮೋರ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಜಯಪ್ರದಾ ಸೇರಿದಂತೆ ಮೂವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಪರಿಶೀಲಿಸಿದ ಚೆನ್ನೈ ಎಗ್ಮೋರ್ ಕೋರ್ಟ್ ಜಯಪ್ರದಾ ಮತ್ತು ಇತರ ಮೂವರಿಗೆ ಆರು ತಿಂಗಳ ಶಿಕ್ಷೆ ವಿಧಿಸಿದೆ. ಚೆನ್ನೈ ಎಗ್ಮೋರ್ ನ್ಯಾಯಾಲಯ ಖ್ಯಾತ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. […]