ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ : ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಸಂಸ್ಕಾರ
ಚೆನ್ನೈ (ತಮಿಳುನಾಡು): ತಮ್ಮ ಅಂಗಾಂಗಗಳನ್ನು ದಾನ ಮಾಡುವವರ ಅಂತ್ಯಕ್ರಿಯೆಯನ್ನು ಇನ್ಮುಂದೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪ್ರಕಟಿಸಿದ್ದಾರೆ.”ತಮ್ಮ ಅಂಗಾಂಗಗಳನ್ನು ದಾನ ಮಾಡುವ ಹಾಗೂ ಅನೇಕ ಪ್ರಾಣಗಳನ್ನು ಉಳಿಸುವವರ ತ್ಯಾಗವನ್ನು ಗೌರವಿಸುವ ಸಲುವಾಗಿ, ಸಾವಿಗೂ ಮುನ್ನ ತಮ್ಮ ಅಂಗಾಂಗಗಳನ್ನು ದಾನ ಮಾಡುವವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು” ಎಂದು ಮುಖ್ಯಮಂತ್ರಿ ಸ್ಟಾಲಿನ್ ಪ್ರಕಟಿಸಿದ್ದಾರೆ. ಇದೇ ವೇಳೆ, ”ಅಂಗಾಂಗ ದಾನದ ಮೂಲಕ ನೂರಾರು ರೋಗಿಗಳಿಗೆ ಮರುಜೀವ ನೀಡುವಲ್ಲಿ ತಮಿಳುನಾಡು ದೇಶದಲ್ಲೇ ಅಗ್ರಸ್ಥಾನದಲ್ಲಿದೆ” ಎಂದು […]