ಕೆಥೊಲಿಕ್ ಸಭಾ ಉಡುಪಿ ಪ್ರದೇಶ್:ಸಮುದಾಯೋತ್ಸವ್-2020 ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ 2020 ಜನವರಿ 19ರಂದು ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಆವರಣದಲ್ಲಿ ಆಯೋಜಿಸಿರುವ ಧರ್ಮಪ್ರಾಂತ್ಯ ಮಟ್ಟದ ಶ್ರೀಸಾಮಾನ್ಯರ ಸಮ್ಮೇಳನ ‘ಸಮುದಾಯೋತ್ಸವ್-2020’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಗುರುವಾರ ಸಂಘಟನೆಯ ಸಭಾಭವನದಲ್ಲಿ ಜರಗಿತು. ಆಮಂತ್ರಣ ಪತ್ರಿಕೆಯನ್ನು ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಧರ್ಮಗುರು ವಂ. ಡಾ. ಲೆಸ್ಲಿ ಡಿಸೋಜಾ ಬಿಡುಗಡೆಗೊಳಿಸಿದರು. ಅನಂತರ ಮಾತನಾಡಿದ ಅವರು ಸಮಾಜದಲ್ಲಿ ಸೇವೆ ನೀಡಲು ಅವಕಾಶ ಸಿಕ್ಕಾಗ ಅದನ್ನು ಸದುಪಯೋಗಪಡಿಸಿಕೊಂಡಾಗ ಬದಲಾವಣೆ ತರಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರಿಗೂ ದೇವರು […]