ಕರಾವಳಿ ಹಾಗೂ ಮಲೆನಾಡಿನಲ್ಲಿ ನಕ್ಸಲರ ಓಡಾಟ: ಕಟ್ಟೆಚ್ಚರ ವಹಿಸಲು ನಕ್ಸಲ್ ನಿಗ್ರಹ ದಳಕ್ಕೆ ಸೂಚನೆ

ಉಡುಪಿ: ನಕ್ಸಲ್ ತಂಡದ ನಾಯಕ ವಿಕ್ರಮ್ ಗೌಡ ಹಾಗೂ ಆತನ ಸಹಚರರರು ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಓಡಾಟ ನಡೆಸಿದ್ದಾರೆ ಎಂಬ ಮಾಹಿತಿಯ ಮೇರೆಗೆ ಈ ಎರಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಐದು ದಿನಗಳ ಕಾಲ ಹೈ ಅಲರ್ಟ್ ಘೋಷಿಸಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಎಎನ್‍ಎಫ್‍ಗೆ ಸೂಚನೆ ನೀಡಲಾಗಿದೆ. ನಕ್ಸಲ್ ಮುಖಂಡ ಸಾಕೇತ್ ರಾಜನ್ ಸಾವಿನ ಬಳಿಕ ವಿಕ್ರಮ್ ಗೌಡ ತಲೆಮರೆಸಿಕೊಂಡಿದ್ದು, ಈಗ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ವಿಕ್ರಮ್ ಗೌಡ ಓಡಾಟದ ಸುಳಿವು ಸಿಕ್ಕಿದೆ. ಈ ಭಾಗದಲ್ಲಿ ನಕ್ಸಲರ […]