ಚಿಕ್ಕಬಳ್ಳಾಪುರದಲ್ಲಿ ಅನ್ಯಸಮುದಾಯದವರಿಂದ ನೈತಿಕ ಪೊಲೀಸ್ ಗಿರಿ
ಚಿಕ್ಕಬಳ್ಳಾಪುರ: ನಗರದಲ್ಲಿ ಅನ್ಯಸಮುದಾಯದ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ ಆಕೆಯ ಸಮುದಾಯದ ಯುವಕರು ಇಬ್ಬರಿಗೂ ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಚಿಕ್ಕಬಳ್ಳಾಪುರದ ಗೋಪಿಕಾ ಚಾಟ್ಸ್ ಬಳಿ ನಡೆದಿದೆ ಎನ್ನಲಾಗಿದೆ. ಈಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗುರುವಾರ ಸಂಜೆ ಈ ಘಟನೆ ಚಿಕ್ಕಬಳ್ಳಾಪುರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಹಿಂದೂ ಯುವಕನ ಜೊತೆ ತಮ್ಮ ಸಮುದಾಯದ ಯುವತಿ ಆಗಮಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ […]