ಮರಣೋತ್ತರ ವರದಿಯಲ್ಲಿ ಬಯಲಾಯ್ತು ಬಾಲಕಿ ಶ್ರೀನಂದಾ ಸಾವಿನ ಕಾರಣ!

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (15) ಪ್ರಕರಣಕ್ಕೆ ಮರಣೋತ್ತರ ಪರೀಕ್ಷೆ ಮಹತ್ವದ ತಿರುವು ನೀಡಿದೆ. ವರದಿ ಪ್ರಕಾರ, ಬಾಲಕಿಯ ಸಾವಿನಲ್ಲಿ ಯಾವುದೇ ಅಸಹಜತೆ ಕಂಡುಬಂದಿಲ್ಲವೆಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ತಲೆಯ ಬಲಭಾಗಕ್ಕೆ ಉಂಟಾದ ಗಂಭೀರ ಗಾಯವೇ ಸಾವಿಗೆ ಕಾರಣವೆಂದು ತಿಳಿದುಬಂದಿದೆ. ದೇಹದ ವಿವಿಧ ಭಾಗಗಳಲ್ಲಿ ಗಾಯಗಳು ಹಾಗೂ ಹಲವೆಡೆ ಮೂಳೆ ಮುರಿತಗಳೂ ಪತ್ತೆಯಾಗಿದ್ದು, ಇವು ಎತ್ತರದಿಂದ ಬಿದ್ದ ಪರಿಣಾಮ ಸಂಭವಿಸಿರುವುದಾಗಿ ವರದಿ ಹೇಳಿದೆ. ಬಾಲಕಿ ಶವವು […]

ದತ್ತ ಜಯಂತಿ ಕಾರ್ಯಕ್ರಮ ಹಿನ್ನಲೆ: ಲಘ ವಾಹನಗಳಲ್ಲಿ ಸಂಚರಿಸಲು ಸೂಚನೆ

ಉಡುಪಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಡಿಸೆಂಬರ್ 24 ರಿಂದ 26ರ ವರೆಗೆ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಭಕ್ತಾದಿಗಳು ಮತ್ತು ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರ ಹಿತದೃಷ್ಟಿಯಿಂದ ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಹೋಗಲಿರುವ ಭಕ್ತಾದಿಗಳು ಮತ್ತು ಸಾರ್ವಜನಿಕರು ಭಾರಿ ವಾಹನಗಳ ಬದಲಿಗೆ ಲಘ ವಾಹನಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಛೇರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.