ದತ್ತ ಜಯಂತಿ ಕಾರ್ಯಕ್ರಮ ಹಿನ್ನಲೆ: ಲಘ ವಾಹನಗಳಲ್ಲಿ ಸಂಚರಿಸಲು ಸೂಚನೆ
ಉಡುಪಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಡಿಸೆಂಬರ್ 24 ರಿಂದ 26ರ ವರೆಗೆ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಭಕ್ತಾದಿಗಳು ಮತ್ತು ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರ ಹಿತದೃಷ್ಟಿಯಿಂದ ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಹೋಗಲಿರುವ ಭಕ್ತಾದಿಗಳು ಮತ್ತು ಸಾರ್ವಜನಿಕರು ಭಾರಿ ವಾಹನಗಳ ಬದಲಿಗೆ ಲಘ ವಾಹನಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಛೇರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.