ಕಾಂಗ್ರೆಸ್ ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ ಸಭೆ
ಉಡುಪಿ: ವಿಧಾನಸಭಾ ಕ್ಷೇತ್ರದ ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ ಸಭೆಯು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ, ತ್ರಿಶ್ಶೂರಿನ ಸಂಸದ ಟಿ.ಎನ್ ಪ್ರತಾಪನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 132 ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರು ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 94 ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಗೌರವಿಸಿ, ಪಕ್ಷವನ್ನು ತಳಮಟ್ಟದಿಂದ […]
ಚಿಕ್ಕಮಗಳೂರು: ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಚಿಕ್ಕಮಗಳೂರು: ಬಾಬಾಬುಡನ್‌ಗಿರಿಯ ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿ ರಚನೆ ಮಾಡುವಂತೆ ಹಲವು ವರ್ಷಗಳ ಹೋರಾಟ ನಡೆಯುತ್ತಿದ್ದು, ಕೊನೆಗೂ ಸರ್ಕಾರ ಎಂಟು ಮಂದಿ ಸದಸ್ಯರ ವ್ಯವಸ್ಥಾಪನಾ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿಯಲ್ಲಿ ಒಬ್ಬ ಮುಸ್ಲಿಂ ಸದಸ್ಯ ಇರಲಿದ್ದಾರೆ. ಮೂರು ವರ್ಷಗಳ ಅವಧಿಗೆ ಸಮಿತಿಯನ್ನು ರಚಿಸಲಾಗಿದೆ. ಹೈಕೋರ್ಚ್ ಆದೇಶದಂತೆ ಆಡಳಿತ ಮಂಡಳಿ ನೇಮಕ ಮಾಡಲಾಗಿದೆ ಎಂದು ಶುಕ್ರವಾರದಂದು ಹಿಂದೂ […]