ಸಾಮಾಜಿಕ ಜಾಲ ತಾಣಗಳಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ಳು ಸುದ್ದಿ ಹರಡಿದಲ್ಲಿ ಕ್ರಮ: ಅಕ್ಷಯ್ ಹಾಕೆ
ಉಡುಪಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ದೇಶದ/ರಾಜ್ಯದ ವಿಡಿಯೋಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂದಿರುತ್ತದೆ. ಸಾರ್ವಜನಿಕರು ತಮ್ಮ ನಗರ/ ಗ್ರಾಮ /ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿದಲ್ಲಿ ಪೊಲೀಸರು ಕೊಡಲೇ ಘಟನಾ ಸ್ಥಳಕ್ಕೆ ಬಂದು […]