ಪ್ರಾಥಮಿಕ ಆರೋಗ್ಯ ಕೇಂದ್ರದ ಶಿಶುಪಾಲನ ಕೇಂದ್ರ ಉದ್ಘಾಟನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಮತ್ತು ರೋಟರಿ ಕ್ಲಬ್ ಅಂಬಲಪಾಡಿ ಇವರ ಸಹಯೋಗದಲ್ಲಿ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಿರುವ ಶಿಶುಪಾಲನಾ ಕೇಂದ್ರವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ, ಪೂರ್ಣ ಪ್ರಮಾಣದಲ್ಲಿ ಇದರ ಉಪಯೋಗ ಆಗಲಿ ಎಂದು ಶುಭ ಹಾರೈಸಿದರು. ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದ ಕಾರ್ಯದರ್ಶಿ ವಸಂತಿ ರಾವ್ ಕೊರಡ್ಕಲ್ ಪ್ರಾಸ್ತವಿಕ ನುಡಿಗಳನ್ನಾಡಿದರು. […]