ಬಾಲ ಕಾರ್ಮಿಕ ಪದ್ಧತಿಯಿಂದ ಯುವ ಸಂಪತ್ತು ವ್ಯರ್ಥವಾಗಿ ದೇಶದ ಅಭಿವೃದ್ದಿಗೆ ತೊಡಕು: ಶಾಸಕ ಯಶ್ಪಾಲ್ ಸುವರ್ಣ
ಉಡುಪಿ: ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಿ ದಾರಿ ತಪ್ಪಲಿದ್ದು, ಇದರಿಂದ ದೇಶದ ಯುವ ಸಂಪತ್ತು ವ್ಯರ್ಥವಾಗುವುದರಿಂದ ದೇಶದ ಅಭಿವೃದ್ಧಿಗೆ ತೊಡಕಾಗಲಿದೆ. ಆದ್ದರಿಂದ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದಲ್ಲಿ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಸೋಮವಾರ ನಗರದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ […]
ಜೂನ್ 12: ರಜತಾದ್ರಿಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯು ಜೂನ್ 12 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ […]
ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದ ಉಡುಪಿ ಜಿಲ್ಲಾಧಿಕಾರಿ
ಉಡುಪಿ: ಉಡುಪಿ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಮಾದರಿ ಜಿಲ್ಲೆಯನ್ನಾಗಿಸಲು ಸಂಬಂಧಪಟ್ಟ ಎಲ್ಲಾಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶನಿವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕನ್ ಸರ್ನ್ ಫಾರ್ ವರ್ಕಿಂಗ್ ಚಿಲ್ಡ್ರನ್ ಕುಂದಾಪುರ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ, ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯ […]