ಬಾಲ ಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ವತಿಯಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ ಕ್ಷೇತ್ರಗಳಲ್ಲಿ ಹಾಗೂ ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರದಂತಹ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರಶಸ್ತಿ ಪುರಸ್ಕೃತ ಮಕ್ಕಳು ಸ್ವಯಂ ದೃಢೀಕೃತ ನಕಲು, ಸ್ವವಿವರ, ದಾಖಲೆಗಳೊಂದಿಗೆ ಹಾಗೂ 2021 ರ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಕಟಗೊಂಡ […]