ಇಂದಿರಾನಗರ ಶಾಲೆಯಲ್ಲಿ ವಿಧ್ಯಾರ್ಥಿಗಳಿಗಾಗಿ ಕಾನೂನು ಅರಿವು ಕಾರ್ಯಕ್ರಮ
ಉಡುಪಿ: ಚೈಲ್ಡ್ ಲೈನ್-1098 ಉಡುಪಿ ವತಿಯಿಂದ ಸರಕಾರಿ ಪ್ರೌಢಶಾಲೆ ಇಂದಿರಾನಗರದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಹಿಳಾ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಶ್ರೀಮತಿ ವಯಲೆಟ್ ಫೆಮೀನಾ ಮಕ್ಕಳ ಜೊತೆ ಸಂವಹನ ಮಾಡುವುದರ ಮೂಲಕ ಮಕ್ಕಳಿಗೆ ಕಾನೂನಿನಬಗ್ಗೆ ವಿವರಿಸುತ್ತಾ ಅಪರಾಧ ಮತ್ತು ಪೋಕ್ಸೋ ಕಾಯಿದೆ, ಮಕ್ಕಳ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಮಕ್ಕಳಿಗೆ ತಮ್ಮ ಕರ್ತವ್ಯಗಳನ್ನು ತಿಳಿಸಿ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವಗಳನ್ನು ರೂಪಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ […]
ಚೈಲ್ಡ್ ಲೈನ್-1098 ವತಿಯಿಂದ ವಿಶ್ವ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆ ಅರಿವು ಕಾರ್ಯಕ್ರಮ
ಉಡುಪಿ: ಚೈಲ್ಡ್ ಲೈನ್-1098 ವತಿಯಿಂದ ವಿಶ್ವ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆಯ ಪ್ರಯುಕ್ತ ಇಂದಿರಾ ನಗರದ ಸರಕಾರಿ ಪ್ರೌಢಶಾಲೆ ಯ ವಿದ್ಯಾರ್ಥಿಗಳಿಗೆ ಮಕ್ಕಳ ಕಳ್ಳ ಸಾಗಾಣಿಕೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಉಡುಪಿ ಚೈಲ್ಡ್ ಲೈನ್-1098 ನ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ರೈಲ್ವೆ ರಕ್ಷಣಾ ಪಡೆ ಇನ್ಸಪೆಕ್ಟರ್ ಪಿ.ವಿ ಮಧುಸೂದನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಮಕ್ಕಳ ಕಳ್ಳ ಸಾಗಾಣಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ಮಕ್ಕಳು ಕಡ್ಡಾಯವಾಗಿ […]