ಸೂಕ್ತ ವೈದ್ಯಕೀಯ ಹಸ್ತಕ್ಷೇಪದಿಂದ ಶಿಶುಗಳಲ್ಲಿ ನ್ಯುಮೋನಿಯಾ ಸಂಬಂಧಿತ ಮರಣಗಳನ್ನು ತಡೆಗಟ್ಟಬಹುದು

ಜಗತ್ತಿನೆಲ್ಲೆಡೆ ಮಕ್ಕಳ ಸಾವಿನ ಏಕೈಕ ದೊಡ್ಡ ಕಾರಣಗಳಲ್ಲಿ ನ್ಯುಮೋನಿಯಾ ಒಂದಾಗಿದೆಯಲ್ಲದೇ, ಐದು ವರ್ಷಗಳಿಗಿಂತಲೂ ಕಡಿಮೆ ವಯಸ್ಸಿನ ಶಿಶುಗಳಲ್ಲಿ ಶೇ. 41ಕ್ಕಿಂತ ಹೆಚ್ಚಿನ ಮರಣಗಳಿಗೆ ಕಾರಣವಾಗಿದೆ. ಇವುಗಳನ್ನು ಸಮಯಕ್ಕೆ ಸರಿಯಾದ ಮತ್ತು ಸೂಕ್ತವಾದ ವೈದ್ಯಕೀಯ ಹಸ್ತಕ್ಷೇಪದೊಂದಿಗೆ ತಡೆಗಟ್ಟಬಹುದಾಗಿದೆ. ಹೆಚ್ಚಿನ ಸಂಖ್ಯೆಯ ನ್ಯುಮೋನಿಯಾ ಸಂಬಂಧಿತ ಸಾವುಗಳನ್ನು ತಡೆಯಬಹುದಾಗಿದೆ. ಬ್ಯಾಕ್ಟೀರಿಯಾ, ವೈರಸ್‌ಗಳು, ಶಿಲೀಂಧ್ರಗಳು ಅಥವಾ ಪರಾವಲಂಬಿಗಳಿಂದಾಗಿ ಈ ಶ್ವಾಸಕೋಶದ ತೀವ್ರ ಉಸಿರಾಟದ ಸೋಂಕು ಉಂಟಾಗಬಹುದು. ಇದು ವಾಯು ಮಾಲಿನ್ಯದಿಂದ ಹೆಚ್ಚಾಗುತ್ತದೆ. ಅಲ್ಲದೇ ಇದು ಶಿಶು ಮರಣಗಳ ಪ್ರಾಥಮಿಕ ಕಾರಣಗಳಲ್ಲಿ ಒಂದಾಗಿದೆ. ಅಪೌಷ್ಟಿಕತೆ, […]

ಮಕ್ಕಳಿಗೆ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಕಿಟ್ ವಿತರಣೆ ಮಾಡಿದ ಜಿಲ್ಲಾಧಿಕಾರಿ

ಉಡುಪಿ: ಕೋವಿಡ್ ಸಂದರ್ಭದಲ್ಲಿ ಜನತೆ ಎದುರಿಸಿದ ಕಷ್ಟ ನಷ್ಟಗಳನ್ನು ಭರ್ತಿ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಆ ಸಂದರ್ಭದಲ್ಲಿ ಎದುರಿಸಿದ ಬಾಧಕಗಳು ಇಂದಿಗೂ ನಮ್ಮ ಕಣ್ಣ ಮುಂದಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್‌ನ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಪಿ.ಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆ ಅಡಿಯಲ್ಲಿ ಪೋಷಕರನ್ನು ಕಳೆದುಕೊಂಡ ಜಿಲ್ಲೆಯ 3 ಮಕ್ಕಳಿಗೆ ಅಂಚೆ ಪಾಸ್ ಪುಸ್ತಕ, ಆಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿಯಿಂದ ಮಕ್ಕಳಿಗೆ ಪತ್ರ, […]

ಕೇರಳದಲ್ಲಿ ಟೊಮೇಟೊ ಜ್ವರ ಪತ್ತೆ: ಐದು ವರ್ಷ ಕೆಳಗಿನ ಮಕ್ಕಳಲ್ಲಿ ಹೆಚ್ಚಿದ ಸೋಂಕು

ಕೊಯಂಬತ್ತೂರು: ಕೇರಳದ ಹಲವಾರು ಭಾಗಗಳಲ್ಲಿ ಮತ್ತೊಂದು ವೈರಸ್ ಪತ್ತೆಯಾಗಿದೆ. ಟೊಮೆಟೊ ಜ್ವರ ಅಥವಾ ಟೊಮೆಟೋ ಫ್ಲೂ ಎಂದು ಗುರುತಿಸಲಾಗುವ ಈ ಅಪರೂಪದ ವೈರಲ್ ಕಾಯಿಲೆಯು ಮಕ್ಕಳಲ್ಲೇ ಹೆಚ್ಚಾಗಿ ಕಂಡುಬರುತ್ತದೆ. ರಾಜ್ಯದಲ್ಲಿ ಇದುವರೆಗೆ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು ತಗುಲಿಸಿದೆ ಎಂದು ಪಿಟಿಐ ವರದಿ ಮಾಡಿದೆ. ವರದಿಯ ಪ್ರಕಾರ, ಈ ಸಂಖ್ಯೆ ಮತ್ತಷ್ಟು ಏರುವ ಮುನ್ಸೂಚನೆಗಳಿವೆ. ರೋಗ ಲಕ್ಷಣಗಳು: # ಟೊಮೆಟೊ ಫ್ಲೂ ಪತ್ತೆ ಹಚ್ಚಲಾಗದ ಜ್ವರವಾಗಿದ್ದು, ಐದು ವರ್ಷಕ್ಕಿಂತ ಕಡಿಮೆ […]

ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣ: ಶೀಘ್ರ ಸ್ಪಂದಿಸಿ ನ್ಯಾಯ ಒದಗಿಸಿ ಎಂದ ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲಾಗುವ ದೌರ್ಜನ್ಯಗಳ ಬಗ್ಗೆ ಮಾಹಿತಿ ಅಥವಾ ದೂರುಗಳು ಬಂದಲ್ಲಿ ಅವುಗಳಿಗೆ ಕೂಡಲೇ ಸ್ಪಂದಿಸಿ, ಪೀಡಿತರಿಗೆ ಆತ್ಮಸ್ಥೈರ್ಯ ತುಂಬಿ, ಸಾಂತ್ವನ ಹೇಳುವುದರ ಜೊತೆಗೆ ಕಾನೂನು ನೆರವನ್ನು ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿ ಹಾಗೂ ಸಮಗ್ರ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ […]