ನಾಳೆ ಭಾರತ vs​ ನೇಪಾಳ ಪಂದ್ಯ, ಚಿನ್ನ ಗೆಲ್ಲುವತ್ತ IPL​ ಸ್ಟಾರ್​ಗಳ ಚಿತ್ತ: ಏಷ್ಯನ್​ ಗೇಮ್ಸ್​

ಹ್ಯಾಂಗ್‌ಝೌ (ಚೀನಾ): ಯಶಸ್ವಿ ಜೈಸ್ವಾಲ್ ವೆಸ್ಟ್​ ಇಂಡೀಸ್​ ಪ್ರವಾಸದಲ್ಲಿ ಟೆಸ್ಟ್​ ಮತ್ತು ಟಿ20 ಪಂದ್ಯಗಳನ್ನಾಡಿದ್ದು, ಒಂದು ಶತಕ ಮತ್ತು ಎರಡು ಅರ್ಧಶತಕದಿಂದ ಒಟ್ಟಾರೆ 7 ಅಂತರರಾಷ್ಟ್ರೀಯ ಪಂದ್ಯಗಳಿಂದ 398 ರನ್ ಕಲೆಹಾಕಿದ್ದಾರೆ. ಐರ್ಲೆಂಡ್​ ವಿರುದ್ಧ ಎರಡು ಪಂದ್ಯಗಳನ್ನಾಡಿದ ರಿಂಕು ಸಿಂಗ್​ಗೆ ಬ್ಯಾಟಿಂಗ್‌ನಲ್ಲಿ ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ. 19ನೇ ಏಷ್ಯಾಡ್​ನಲ್ಲಿ ಭಾರತ ಕ್ರಿಕೆಟ್​ ತಂಡ ಭಾಗವಹಿಸುತ್ತಿದ್ದು, ಚೊಚ್ಚಲ ಪ್ರಯತ್ನದಲ್ಲೇ ಚಿನ್ನ ಗೆಲ್ಲುವ ಭರವಸೆ ಇದೆ. ಏಷ್ಯಾಡ್​ನಲ್ಲಿ ಅವರ ಬ್ಯಾಟ್​ನಿಂದ ರನ್‌ಗಳನ್ನು ನಿರೀಕ್ಷಿಸಲಾಗುತ್ತಿದೆ. ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಪ್ರೀಮಿಯರ್​​ […]