ಆರ್ಚರಿ, ಸ್ಕ್ವಾಷ್ನಲ್ಲಿ ಕ್ವಾರ್ಟರ್ ಫೈನಲ್ಗೆ ಲಗ್ಗೆ: 3,000 ಮೀ ಸ್ಟೀಪಲ್‌ಚೇಸ್‌ನಲ್ಲಿ ಭಾರತಕ್ಕೆ ಬೆಳ್ಳಿ, ಕಂಚು
ಹ್ಯಾಂಗ್‌ಝೌ (ಚೀನಾ): ಶೂಟಿಂಗ್ ವಿಭಾಗದ ನಂತರ ಭಾರತ ಅಥ್ಲೆಟಿಕ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ.ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ ಈವರೆಗೆ ಅಥ್ಲೆಟಿಕ್ಸ್ ವಿಭಾಗದಲ್ಲಿ 2 ಚಿನ್ನ, 6 ಬೆಳ್ಳಿ ಮತ್ತು 6 ಕಂಚು ಸೇರಿದಂತೆ 13 ಪದಕಗಳು ಬಂದಿವೆ. ಏಷ್ಯಾಡ್ನ 9ನೇ ದಿನವಾದ ಸೋಮವಾರ 3,000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಬೆಳ್ಳಿ ಹಾಗು ಕಂಚಿನ ಪದಕ ಗೌರವ ಸಿಕ್ಕಿದೆ. ಪಾರುಲ್ ಚೌಧರಿ 9:27.63 ಸೆಕೆಂಡ್ಗಳ ಸಮಯದಲ್ಲಿ ಗುರಿ ಮುಟ್ಟಿ ಎರಡನೇ ಸ್ಥಾನ ಪಡೆದರು. ಚೊಚ್ಚಲ ಏಷ್ಯನ್ ಗೇಮ್ಸ್ ಆಡುತ್ತಿರುವ ಪ್ರೀತಿ 9:43.32 […]