ಕುನೊ ಉದ್ಯಾನವನದಲ್ಲಿ ಮೃತ ಚೀತಾಗಳ ಸಂಖ್ಯೆ 9ಕ್ಕೆ ಏರಿಕೆ: ‘ಧಾತ್ರಿ’ ಹೆಣ್ಣು ಚೀತಾ ಸಾವು
ಭೋಪಾಲ್ (ಮಧ್ಯಪ್ರದೇಶ):ಚೀತಾ ಯೋಜನೆಯಡಿಯಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಎರಡು ಬ್ಯಾಚ್‌ಗಳಲ್ಲಿ ಒಟ್ಟು 20 ಚೀತಾಗಳನ್ನು ತರಿಸಿಕೊಳ್ಳಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಐದು ಹೆಣ್ಣು ಮತ್ತು ಮೂರು ಗಂಡು ಸೇರಿ ಎಂಟು ಚೀತಾಗಳು ಹಾಗೂ ಈ ವರ್ಷದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಸ್ಥಳಾಂತರ ಮಾಡಲಾಗಿದೆ. ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಚೀತಾಗಳನ್ನು ಇರಿಸಲಾಗಿದೆ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಇದರೊಂದಿಗೆ ಮಾರ್ಚ್ ತಿಂಗಳಿಂದ ಇದುವರೆಗೆ ಮೃತಪಟ್ಟ ಚೀತಾಗಳ […]