ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ : ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸೋಮವಾರದಂದು ಆಚರಿಸಲಾಯಿತು. ಉಡುಪಿ ಅರಣ್ಯ ಸಂಚಾರಿದಳದ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಜಿ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಇಂದು ಪ್ರಕೃತಿ ವಿನಾಶದ ಅಂಚಿನೆಡೆಗೆ ಸಾಗುತ್ತಿದೆ. ಪ್ರಕೃತಿಗೆ ಪ್ರತಿಯೊಂದು ಗಿಡವೂ ಅತ್ಯಗತ್ಯ. ಪ್ರತಿಯೊಬ್ಬರೂ ಕನಿಷ್ಠ ಎರಡು ಗಿಡಗಳನ್ನಾದರೂ ನೆಟ್ಟು ಪ್ರಕೃತಿಯನ್ನು ಸಂರಕ್ಷಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮೇರಿಯನ್ ಡಿಸೋಜ ಮಾತನಾಡಿ, ಹಿಂದೆ ನಮ್ಮ ಪ್ರಕೃತಿಯು ಬಹಳ ಸುಂದರವಾಗಿತ್ತು. ಆದರೆ […]