ಉಡುಪಿ: ಜಿಲ್ಲೆಯಾದ್ಯಂತ ಸಂಭ್ರಮದ ಕ್ರಿಸ್ಮಸ್ ಆಚರಣೆ

ಉಡುಪಿ: ಏಸುಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿ ಭಕ್ತಿ, ಶೃದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದರು. ಮಂಗಳವಾರ ರಾತ್ರಿ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ತಮ್ಮ ಅಧಿಕೃತ ಚರ್ಚು ಮಿಲಾಗ್ರಿಸ್ ಕೆಥೆಡ್ರಲ್ ಕಲ್ಯಾಣಪುರದಲ್ಲಿ ಅರ್ಪಿಸಿ ಹಬ್ಬದ ಸಂದೇಶ ನೀಡಿದರು. ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ಪ್ರಧಾನ ಧರ್ಮಗುರು […]