ಸಾರ್ವಜನಿಕ ಗಣೇಶೋತ್ಸವ ಓಕೆ, ಆದ್ರೆ ಈ ರೂಲ್ಸ್ ಫಾಲೋ ಮಾಡ್ಲೇಬೇಕು ಜೋಕೆ!
ಬೆಂಗಳೂರು: ಹಲವು ಷರತ್ತುಬದ್ಧ ನಿಯಮಗಳೊಂದಿಗೆ ಗರಿಷ್ಠ ಐದು ದಿನಗಳ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ಕೊಟ್ಟಿದೆ. ಬೆಂಗಳೂರಿನಲ್ಲಿ ಹಬ್ಬದ ನಿಯಮ ಪಾಲನೆಯ ಉಸ್ತುವಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ. ಅನುಮತಿ ಕೊಟ್ಟ ಸ್ಥಳಗಳು, ಸರ್ಕಾರಿ, ಖಾಸಗಿ ಖಾಲಿ ಜಾಗಗಳು, ಮೈದಾನಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ದೇವಸ್ಥಾನಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಆದ್ಯತೆ ನೀಡಲಾಗಿದೆ. ಇನ್ನು, ಬೆಂಗಳೂರು ಮಾತ್ರವಲ್ಲದೇ ಎಲ್ಲಾ ಜಿಲ್ಲೆಗಳಲ್ಲಿ ಗಣೇಶೋತ್ಸವ ವೇಳೆ ಜಿಲ್ಲಾಡಳಿತಗಳು ನಿಗಾ ವಹಿಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ದೇವಸ್ಥಾನ ಮತ್ತು ಮನೆಗಳಲ್ಲಿ ಹೊರತುಪಡಿಸಿ, ಸಾರ್ವಜನಿಕವಾಗಿ […]