ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನ
ಉಡುಪಿ : ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ 3,000 ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್‌ನ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿಂದಾಗಿ ಬಾಧಿತರಾಗಿದ್ದ ಸಮಾಜದ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ […]