ಮರಳುಗಾರಿಕೆ ಆರಂಭಿಸುವಂತೆ ಆಗ್ರಹಿಸಿ ಸಿಐಟಿಯು: ಕಟ್ಟಡ ಕಾರ್ಮಿಕರ‌ ಪ್ರತಿಭಟನೆ 

ಉಡುಪಿ: ಜಿಲ್ಲೆಯಲ್ಲಿ ಶೀಘ್ರವೇ ಮರಳುಗಾರಿಕೆ ಆರಂಭಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಬಾಲಕೃಷ್ಣ ಶೆಟ್ಟಿ, ಕೇಂದ್ರ ಹಾಗೂ ರಾಜ್ಯ ಎರಡು ಕಡೆ ಬಿಜೆಪಿ ಸರ್ಕಾರವಿದೆ. ಜಿಲ್ಲೆಯಲ್ಲಿ ಶಾಸಕರು, ಸಂಸದರು ಸೇರಿದಂತೆ ಬಹುತೇಕ ಜನಪ್ರತಿನಿಧಿಗಳು ಬಿಜೆಪಿ ಪಕ್ಷದವರಿದ್ದಾರೆ. ಆದರೂ ಈವರೆಗೆ ಮರಳಿನ ಸಮಸ್ಯೆಯನ್ನು ಪರಿಹಾರ ಮಾಡಲು ಆಗದಿರುವುದು ವಿಪರ್ಯಾಸವೇ ಸರಿ ಎಂದರು. ಮರಳಿನ ಸಮಸ್ಯೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್‌ ಜನಪ್ರತಿನಿಧಿಗಳು […]