ಮಹಿಳೆಯರ ಮೇಲಿನ ಹಿಂಸೆ ಮತ್ತು ದೌರ್ಜನ್ಯ ತಡೆಯಲು ಸರ್ಕಾರ ವಿಫಲ: ಸಿಐಟಿಯು ಟೀಕೆ

ಉಡುಪಿ: ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಮಹಿಳೆಯರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಿಐಟಿಯು ಉಡುಪಿ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಉಡುಪಿಯ ಪ್ರಧಾನ ಅಂಚೆ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಮಹಿಳೆಯರ ಮೇಲಿನ ಹಿಂಸೆ ಮತ್ತು ದೌರ್ಜನ್ಯ ಹೆಚ್ಚಾಗಿದ್ದು, ಇದನ್ನು ತಡೆಗಟ್ಟಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ರಕ್ಷಣೆ ಕೊಡುವ ಬದಲು ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಸಿಐಟಿಯು ಮುಖಂಡ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಬಿಜೆಪಿ ಸರ್ಕಾರ […]