ಹಂಚು ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಸಿಐಟಿಯು ಧ್ವಜಾರೋಹಣ

ಕುಂದಾಪುರ: ಇಲ್ಲಿನ ಹಂಚು ಕಾರ್ಮಿಕರ ಭವನದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಕೆ ಶಂಕರ್ ಧ್ವಜಾರೋಹಣ ನೆರವೇರಿಸಿದರು. ಕುಂದಾಪುರದ ಎಲ್ಲಾ ಹತ್ತು ಹಂಚು ಕಾರ್ಖಾನೆಗಳಲ್ಲಿ ಕೆಲಸಕ್ಕೂ ಮುನ್ನ ಕಾರ್ಖಾನೆ ಎದುರುಗಡೆ ಧ್ವಜಾರೋಹಣ ಮಾಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಘೋಷಣೆ ಮೊಳಗಿಸಿದರು. ಸಿಐಟಿಯು ಮುಖಂಡ ಎಚ್ ನರಸಿಂಹ, ಮಹಾಬಲ ವಡೇರಹೋಬಳಿ, ಬಲ್ಕೀಸ್, ರಾಜು ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು. ಬೈಂದೂರು ಸಿಐಟಿಯು ಕಚೇರಿಯಲ್ಲಿ ಸಿಐಟಿಯು ಧ್ವಜಾರೋಹಣ ಶ್ರೀಧರ ಉಪ್ಪುಂದ ನೆರವೇರಿಸಿದರು. ಸಿಐಟಿಯು ಸಂಚಾಲಕ ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಹಾಜರಿದ್ದರು.

ಸಿಐಟಿಯು ವತಿಯಿಂದ ರಾಜ್ಯ ಮತ್ತು ಕೇಂದ್ರ ಸರಕಾರಗಳ ಬಜೆಟ್ ಕುರಿತು ಸಂವಾದ ಕಾರ್ಯಕ್ರಮ

ಉಡುಪಿ ಮತ್ತು ಬ್ರಹ್ಮಾವರ ಸಿಐಟಿಯು ತಾಲೂಕು ಸಮಿತಿಯು ಜಂಟಿ ಆಶ್ರಯದಲ್ಲಿ, ವಿಮಾ ನೌಕರರ ಸಂಘದ ಕಛೇರಿಯಲ್ಲಿ ರಾಜ್ಯ ಮತ್ತು ಕೇಂದ್ರ ಬಜೆಟ್ 2023ರ ಬಗ್ಗೆ ಸಂವಾದ ಕಾರ್ಯಕ್ರಮವು ಫೆ. 28 ರಂದು ನಡೆಯಿತು. ಸಭೆಯ ಅಧ್ಯಕ್ಷ ಸ್ಥಾನವನ್ನು ಸಿಐಟಿಯು ಜಿಲ್ಲಾ ಸಮಿತಿ ಸದಸ್ಯ ಕಾಂ ವಾಮನ ಪೂಜಾರಿ ವಹಿಸಿದ್ದರು. ಉಡುಪಿ ಜಿಲ್ಲೆಯ ಸಿಐಟಿಯುನ ಕಾರ್ಯದರ್ಶಿ ಕಾಂ ಚಂದ್ರಶೇಖರ್ ಮಾತನಾಡಿ, ಬಜೆಟ್ ನಿಂದ ಜನಸಾಮಾನ್ಯರ ಬದುಕಿನ ಮೇಲೆ ಆಗುವಂತಹ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ […]

ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ: ಸಿಐಟಿಯು ರಾಜ್ಯ ಕಾರ್ಯದರ್ಶಿ ಮಾಂತೇಶ್‌ 

ಉಡುಪಿ: ಕಳೆದ 45 ವರ್ಷಗಳಿಗೆ ಹೋಲಿಸಿದರೆ ದೇಶದಲ್ಲಿ ಪ್ರಸ್ತುತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಬೆಲೆ ಏರಿಕೆಯ ಪರಿಣಾಮ ಸಾಮಾನ್ಯ ಜನರಿಗೆ ಬದುಕು ನಡೆಸುವುದೇ ದುಸ್ತರವಾಗಿದೆ. ನೋಟು ಅಮಾನೀಕರಣ ಆದ ಬಳಿಕ ನಗರ ಪ್ರದೇಶದಲ್ಲಿ ಉದ್ಯೋಗ ಕಡಿಮೆ ಆಗಿದೆ. ಜನರು ನಗರದಿಂದ ಗ್ರಾಮೀಣ ಪ್ರದೇಶಕ್ಕೆ ವಲಸೆ ಹೋಗುತ್ತಿದ್ದಾರೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಮಾಂತೇಶ್‌ ಹೇಳಿದರು. ಮೇ ದಿನಾಚರಣೆಯ ಅಂಗವಾಗಿ ಸಿಐಟಿಯು ಉಡುಪಿ ತಾಲ್ಲೂಕು ಘಟಕದ ವತಿಯಿಂದ ಅಜ್ಜರಕಾಡಿನ ಹುತಾತ್ಮ ಸೈನಿಕರ ಸ್ಮಾರಕದ ಬಳಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ […]