ಉಡುಪಿ: ಕಳ್ಳತನದ ಆರೋಪಿಗೆ ಜೈಲು ಶಿಕ್ಷೆ

ಉಡುಪಿ: ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ ಆರೋಪಿಗೆ ಉಡುಪಿ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಮಾರ್ಚ್ 26 ರಂದು ರಾತ್ರಿ ಗುರುರಾಜ್ ಎಂಬಾತನು, ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗ ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ ರಸ್ತೆಯಲ್ಲಿರುವ ಸುನೀತಾ ರಾಮಚಂದ್ರ ಎಂಬವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ […]

ಕಳ್ಳತನದ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ನಗದು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2021 ನವೆಂಬರ್ 17 ರಂದು ರಾತ್ರಿ ಸುಖೇಶ್ ನಾಯ್ಕ್ ಎಂಬಾತನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಗುಂಡಿಬೈಲು ದುಗ್ಗಣ್ಣ ಬೆಟ್ಟು ಮಾರ್ಗ ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ ರಸ್ತೆಯಲ್ಲಿರುವ ಬಾಬು ಆಚಾರ್ಯ ಅವರ ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿ ಕಪಾಟಿನ ಲಾಕರ್‌ನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಹಿನ್ನೆಲೆ […]

ಅತಿ ವೇಗದ ಬೈಕ್ ಚಲಾವಣೆಯಿಂದ ಅಪಘಾತ ಪಡಿಸಿದ ಆರೋಪಿಗೆ ಶಿಕ್ಷೆ

ಉಡುಪಿ: ಅತೀ ವೇಗ ಹಾಗೂ ಅಜಾಕರೂಕತೆಯಿಂದ ಬೈಕ್ ಚಲಾಯಿಸಿ, ತೀವ್ರ ಸ್ವರೂಪದ ಗಾಯಗೊಳಿಸಿದ ವ್ಯಕ್ತಿಗೆ ಹಾಗೂ ಬೈಕ್‌ಗೆ ವಾಯು ಮಾಲಿನ್ಯ ಪತ್ರ ಹೊಂದಿಲ್ಲದ ವ್ಯಕ್ತಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2020 ಅಕ್ಟೋಬರ್ 3 ರಂದು ರಾತ್ರಿ 10.15 ರ ಸುಮಾರಿಗೆ 1ನೇ ಆರೋಪಿಯಾದ ಪ್ರಶಾಂತ್ ಎಂಬಾತನು 2ನೇ ಆರೋಪಿಯಾದ ಶರತ್‌ಗೆ ಸೇರಿದ ಮೋಟಾರ್ ಸೈಕಲ್ ಅನ್ನು ಸಂತೆಕಟ್ಟೆ ಕಡೆಯಿಂದ ಬ್ರಹ್ಮಾವರ ಕಡೆಗೆ ಅತೀವೇಗ ಹಾಗೂ ಅಜಾಕರೂಕತೆಯಿಂದ […]

ದುಡುಕುತನದಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ದುಡುಕುತನ ಹಾಗೂ ನಿರ್ಲಕ್ಯದಿಂದ ಕಾರು ಚಲಾಯಿಸಿ ಪಾದಚಾರಿಗೆ ಡಿಕ್ಕಿ ಹೊಡೆದು, ತೀವ್ರ ಸ್ವರೂಪದ ಗಾಯಗೊಳಿಸಿದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2020 ಜನವರಿ 7 ರಂದು ಸಂಜೆ 7 ಗಂಟೆಯ ಸುಮಾರಿಗೆ ಕೆಳಾರ್ಕಳ ಬೆಟ್ಟು ನಿವಾಸಿ ಆಲ್ವಿನ್ ಲಾರೆನ್ಸ್ ಎಂಬಾತನು ಪುತ್ತೂರು ಗ್ರಾಮದ ರಾ. ಹೆ 66 ರಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ತನ್ನ ಕಾರನ್ನು ಎಡ ಬದಿಗೆ ಚಲಾಯಿಸಿ, ರಸ್ತೆ […]

ಸುಳ್ಳು ದಾಖಲೆ ಸೃಷ್ಟಿಸಿ ಪಾಸ್ ಪೋರ್ಟ್ ರಚಿಸಿ ವಂಚಿಸಿದ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಪಾಸ್‌ಪೋರ್ಟ್ ಗಳನ್ನು ಹೊಂದಿ ಸರ್ಕಾರಕ್ಕೆ ವಂಚಿಸಿದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಪಲಿಮಾರು ಗ್ರಾಮದ ರಾಖಿ ವಿನ್‌ಸೆಂಟ್ ಡಿ ಸೋಜಾ ಎಂಬಾತನು ತನ್ನ ಅಣ್ಣನಾದ ಪಿಯೂಶ್ ಆಗಸ್ಟಿನ್ ಡಿ ಸೋಜರವರ ಹೆಸರನ್ನು ದುರ್ಬಳಕೆ ಮಾಡಿ, ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ತನ್ನದೇ ಭಾವಚಿತ್ರ ಹಾಗೂ ಬೇರೆ ಬೇರೆ ಹೆಸರು ಮತ್ತು ವಿಳಾಸದ ಪಾಸ್‌ಪೋರ್ಟ್ಗಳನ್ನು ಹೊಂದಿದ್ದು, ಸದ್ರಿ ಪಾಸ್‌ಪೋರ್ಟ್ಗಳನ್ನು ಹೊಂದಲು ಪಾವುಲ್ ಡಿಸೋಜಾ […]