ಚುನಾವಣಾ ಸಂಸ್ಥೆಗಳ ಆಯುಕ್ತರ ನೇಮಕಾತಿಗಾಗಿ ಹೊಸ ಮಸೂದೆ: ಆಯ್ಕೆ ಸಮಿತಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಲ್ಲ ಸ್ಥಾನ

ನವದೆಹಲಿ: ಇಂದು ರಾಜ್ಯಸಭೆಯಲ್ಲಿ ಮಂಡಿಸಲಿರುವ ಹೊಸ ಮಸೂದೆಯ ಪ್ರಕಾರ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಿದೆ. ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್, ಚುನಾವಣಾ ಆಯೋಗದ ಸ್ವಾತಂತ್ರ್ಯವನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ, ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಈ ಮೂವರನ್ನು ಒಳಗೊಂಡ ಸಮಿತಿಯು ಚುನಾವಣಾ ಸಂಸ್ಥೆಗೆ ನೇಮಕಾತಿಗಳನ್ನು ಮಾಡಬೇಕು ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ […]
ಸಿಜೆಐ ಟಿ.ಎಸ್.ನರಸಿಂಹ ಅವರಿಂದ ಶ್ರೀಕೃಷ್ಣಮಠಕ್ಕೆ ಭೇಟಿ

ಉಡುಪಿ: ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಟಿ.ಎಸ್.ನರಸಿಂಹ ತಮ್ಮ ಕುಟುಂಬ ಸಮೇತರಾಗಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರು ಉಪಸ್ಥಿತರಿದ್ದರು.
ಹಿಜಾಬ್ ಅರ್ಜಿ ಆಲಿಕೆಗೆ ಸುಪ್ರೀಂ ಕೋರ್ಟ್ ನಿಂದ ತ್ರಿಸದಸ್ಯ ಪೀಠ ಸ್ಥಾಪನೆ ಸಾಧ್ಯತೆ

ನವದೆಹಲಿ: ಕಳೆದ ವರ್ಷದ ವಿಭಜಿತ ತೀರ್ಪಿನ ನಂತರ ಕರ್ನಾಟಕ ಶಾಲೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಸಂಬಂಧಿಸಿದ ಪ್ರಕರಣದ ತೀರ್ಪು ನೀಡಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸಲು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಕಳೆದ ವರ್ಷ ಅಕ್ಟೋಬರ್ 13 ರಂದು ಹಿಜಾಬ್ ವಿವಾದದಲ್ಲಿ ವಿರುದ್ಧ ತೀರ್ಪುಗಳನ್ನು ನೀಡಿತ್ತು ಮತ್ತು ಪ್ರಕರಣದ ತೀರ್ಪು ನೀಡಲು ಸೂಕ್ತ ಪೀಠವನ್ನು ರಚಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿತ್ತು. ಫೆಬ್ರವರಿ 6 ರಿಂದ ರಾಜ್ಯದಲ್ಲಿ ಕೆಲವು ತರಗತಿಗಳಿಗೆ ನಿಗದಿಯಾಗಿರುವ ಪ್ರಾಯೋಗಿಕ ಪರೀಕ್ಷೆಗಳನ್ನು […]
ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವ್ಯವಸ್ಥೆಯಲ್ಲಿ ಸುಧಾರಣೆ ಅತ್ಯಗತ್ಯ: ಸುಪ್ರೀಂಕೋರ್ಟ್ ನ್ಯಾ.ಅಬ್ದುಲ್ ನಜೀರ್

ಉಡುಪಿ: ನ್ಯಾಯಾಲಯದಲ್ಲಿನ ಕ್ರಿಮಿನಲ್ ಪ್ರಕರಣಗಳಲ್ಲಿ ಶೇ.95 ರಷ್ಟು ಮಂದಿ ಅಂತಿಮ ವಿಚಾರಣೆಯಲ್ಲಿ ನಿರಪರಾಧಿಗಳೆಂದು ಬಿಡುಗಡೆಯಾಗುತ್ತಿದ್ದು, ಇಂತಹ ಪ್ರಕರಣಗಳು ಇತ್ಯರ್ಥಗೊಳ್ಳುವುದಕ್ಕೆ ಸುಮಾರು 10 ವರ್ಷಗಳು ತೆಗೆದುಕೊಳ್ಳಲಿದ್ದು, ಈ ಪ್ರಕ್ರಿಯೆಗಳು ಮುಗಿಯುವವರೆಗೆ ಆಪಾದಿತ ವ್ಯಕ್ತಿಯು ಒಂದು ರೀತಿಯಲ್ಲಿ ಶಿಕ್ಷೆಯನ್ನೇ ಅನುಭವಿಸುತ್ತಾನೆ. ಈ ಬಗ್ಗೆ ಸುಧಾರಣೆಯ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅಭಿಪ್ರಾಯ ಪಟ್ಟರು. ಅವರು ಶುಕ್ರವಾರ ನಗರದ ಜಿಲ್ಲಾ ಕೋರ್ಟ್ ಆವರಣದಲ್ಲಿ, ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಉಡುಪಿ, ವಕೀಲರ ಸಂಘ ಉಡುಪಿ ಮತ್ತು ಬೈಂದೂರು […]
ಡಿ.30 ರಂದು ಉಡುಪಿಯ ನೂತನ ಅನೆಕ್ಸ್ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಸಮಾರಂಭ

ಜಿಲ್ಲಾ ನ್ಯಾಯಾಂಗ, ಉಡುಪಿ ಲೋಕೋಪಯೋಗಿ ಇಲಾಖೆ, ಉಡುಪಿ ಮತ್ತು ವಕೀಲರ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ನೂತನ ಅನೆಕ್ಸ್ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಸಮಾರಂಭವು ಡಿ.30 ಶುಕ್ರವಾರ ದಂದು ಬೆಳಿಗ್ಗೆ 10:30 ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ. ಸರ್ವೋಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಇವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ […]