ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ 8ನೇ ಪರಿಸರ ಸ್ನೇಹಿ ಅಭಿಯಾನ
ಉಡುಪಿ: ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ 8ನೇ ವಾರದ ಪರಿಸರ ಸ್ನೇಹಿ ಅಭಿಯಾನವು ಶನಿವಾರ ಸಂಜೆ ಅಜ್ಜರಕಾಡು ಉದ್ಯಾನವನದಲ್ಲಿ ನಡೆಯಿತು. ವೆಸ್ಟ್ ಇಂಡೀಸ್ನಲ್ಲಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾಗಿರುವ ಡಾ. ಶಿವಾನಂದ ನಾಯಕ್ ಅವರು ಚಾಲನೆ ನೀಡಿ ಮಾತನಾಡಿ, ಪರಿಸರವನ್ನು ಸಂರಕ್ಷಿಸಲು ಪ್ರತಿಯೊಬ್ಬರೂ ಕ್ರಿಯಾಶೀಲ ಪ್ರಯತ್ನವನ್ನು ಮಾಡಿದರೆ ಜಾಗತಿಕ ತಾಪಮಾನ ಏರಿಕೆ ಪ್ರಕ್ರಿಯೆಗೆ ಕಡಿವಾಣ ಹಾಕಬಹುದು. ಗಿಡಗಳನ್ನು ನೆಡುವ ಬಗ್ಗೆ ಮಾತ್ರ ಗಮನಹರಿಸದೇ, ಅದನ್ನು ಪೋಷಿಸಿ ಹೆಮ್ಮರವಾಗಿ ಬೆಳೆಯಲು ಪೂರಕ ವಾತಾವರಣ ಸೃಷ್ಟಿಸಬೇಕು ಎಂದರು. ನಗರಸಭಾ ಸದಸ್ಯೆ ರಶ್ಮಿ […]