ಮಣಿಪಾಲದಲ್ಲಿ ಜಾಗತಿಕ ಕೈ ತೊಳೆಯುವ ದಿನ; ಶುಚಿತ್ವದ ಬಗ್ಗೆ ಅರಿವು ಮೂಡಿಸಿವುದು ಅಗತ್ಯ: ಡಾ. ಶರತ್ ಕೆ.
ಉಡುಪಿ: ಜನಜಾಗೃತಿ ಮೂಡಿಸುವ ಉದ್ದೇಶದಿಂದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯು ಶುಲ್ಕೆ ಕಂಪನಿಯ ಸಹಭಾಗಿತ್ವದೊಂದಿಗೆ ಮಂಗಳವಾರ ಜಾಗತಿಕ ಕೈ ತೊಳೆಯುವ ದಿನವನ್ನು ಆಚರಿಸಿತು. ಈ ಜನಜಾಗೃತಿ ಕಾರ್ಯಕ್ರಮವು ಬೆಳಿಗ್ಗೆ 5ಗಂಟೆಗೆ ಆಸ್ಪತ್ರೆಯ ಹೊರರೋಗಿ ವಿಭಾಗದ ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆರಂಭವಾಗಿ ಸಂಜೆ 5ಗಂಟೆಗೆ ಮುಕ್ತಾಯಗೊಂಡಿತು. ಮಣಿಪಾಲ, ಉಡುಪಿ ಮತ್ತು ಕಾರ್ಕಳ ಆಸ್ಪತ್ರೆಗಳಲ್ಲಿ ಏಕಕಾಲದಲ್ಲಿ ನಡೆದ ಕೈ ತೊಳೆಯುವ ಜಾಗೃತಿ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಡೀನ್ […]