ಒತ್ತುವರಿ ಜಾಗ ತೆರವಿಗೆ ಆದ್ಯತೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳ ಒತ್ತುವರಿ ಕಾರ್ಯವನ್ನು ತೆರವುಗೊಳಿಸುವ ಕುರಿತು ಅದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಉಡುಪಿ ತಾಲೂಕು ಭೈರಂಪಳ್ಳಿ ಗ್ರಾಮ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ನಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕ ಉದ್ದೇಶದಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ವಿವಿಧ ಪ್ರದೇಶದಲ್ಲಿ ಜಾಗಗಳನ್ನು ಕಾಯ್ದಿರಿಸಲಾಗಿದ್ದು, ಇಂತಹ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಂಡು, ಒತ್ತುವರಿ ಕಾರ್ಯದ ತೆರವು ಕಾರ್ಯಾಚರಣೆಗೆ ಹೆಚ್ಚಿನ […]