ಹಿರಿಯಡಕ: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ಉಡುಪಿ, ಜುಲೈ 19: ವಿದ್ಯಾರ್ಥಿಗಳು ತಮ್ಮ ಅಮೂಲ್ಯ ವಿದ್ಯಾರ್ಥಿ ಜೀವನವನ್ನು ಅಧ್ಯಯನ ಶೀಲತೆಯ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಸಾಫಲ್ಯ ಟ್ರಸ್ಟ್ ನ ಅಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಅವಿಭಜಿತ ದಕ್ಷಣ ಕನ್ನಡ ಜಿಲ್ಲೆಯ ನೂತನ ಸಮಾಜ ಸೇವಾ ಸಂಸ್ಥೆ “ಸಾಫಲ್ಯ ಟ್ರಸ್ಟ್” ವತಿಯಿಂದ ಕೊಡುಗೆಯಾಗಿ ನೀಡಿರುವ ಆಧುನಿಕ “ಶುದ್ಧ ಕುಡಿಯುವ ನೀರಿನ ಘಟಕ”ವನ್ನು ಉದ್ಘಾಟಿಸಿ, ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಾಫಲ್ಯ ಟ್ರಸ್ಟ್‍ನ ಕಾರ್ಯದರ್ಶಿ […]
ತೆಂಕನಿಡಿಯೂರು ಕಾಲೇಜಿನಲ್ಲಿ ಇತಿಹಾಸ ಎಂ.ಎ. ಉದ್ಘಾಟನೆ
ಉಡುಪಿ, ಜುಲೈ 19: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಇಲ್ಲಿ ಇತಿಹಾಸ ಸ್ನಾತಕೋತ್ತರ ಅಧ್ಯಯನ ಜುಲೈ 17 ರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜನಾರ್ಧನ ತೋನ್ಸೆ ನೆರವೇರಿಸಿ ಶುಭ ಹಾರೈಸಿದರು. ಶಿರ್ವ ಸೈಂಟ್ ಮೆರೀಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜನ್ ಮಾತನಾಡಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಸತತ ಅಧ್ಯಯನ ಶೀಲರಾದರೆ ಯಶಸ್ಸು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ […]