ಭಾನುವಾರ ಪ್ರವಾಹಪೀಡಿತ ಕುಟುಂಬಗಳಿಗೆ 10,000 ರೂ. ಆರ್ಥಿಕ ನೆರವು ಘೋಷಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ನವದೆಹಲಿ : ನದಿದಡದಲ್ಲಿ ವಾಸಿಸುವ ಅನೇಕ ಬಡ ಕುಟುಂಬಗಳು ತೀವ್ರ ತೊಂದರೆ ಅನುಭವಿಸುತ್ತಿವೆ. ಕೆಲವು ಕುಟುಂಬಗಳ ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿ ಹೋಗಿವೆ. ಹೀಗಾಗಿ, ಪ್ರವಾಹಪೀಡಿತ ಕುಟುಂಬಗಳಿಗೆ ತಲಾ 10 ಸಾವಿರ ರೂ. ಪರಿಹಾರಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ . ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಯಮುನಾ ನದಿ ಭಾರಿ ಪ್ರವಾಹ ಉಂಟುಮಾಡಿದೆ.ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ದೆಹಲಿಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಂತ್ರಸ್ತರಿಗೆ […]