ಬಜೆಟ್ ನಲ್ಲಿ ಹೆಚ್ಚು ಅನುದಾನ ನೀಡುವಂತೆ ಸಿಎಂಗೆ ಮನವಿ: ಸಚಿವ ಕೋಟ
ಉಡುಪಿ: ಈ ಬಾರಿಯ ಬಜೆಟ್‌ನಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಕಳೆದ ಬಾರಿಗಿಂತ ಎರಡು ಪಟ್ಟು ಹೆಚ್ಚು ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಕೋವಿಡ್ ಕಾರಣದಿಂದ ಅನುದಾನ ಕಡಿತಗೊಂಡಿತ್ತು. 3500 ದಿಂದ 4 ಸಾವಿರ ಕೋಟಿ ಅನುದಾನ ದೊರಕಿತ್ತು. ಆದರೆ, ಈ ಸಲ […]