ಕೊರಗ ಜನಾಂಗದವರ ವೈದ್ಯಕೀಯ ವೆಚ್ಚ ಮರುಪಾವತಿ ಯೋಜನೆ ಮುಂದುವರಿಸಲು ಮುಖ್ಯಮಂತ್ರಿ ಸೂಚನೆ: 3 ಜಿಲ್ಲೆಗಳ ಶಾಸಕರ ನಿಯೋಗದ ಮನವಿಗೆ ಬೊಮ್ಮಾಯಿ ಸ್ಪಂದನೆ
ಉಡುಪಿ: ಆರ್ಥಿಕವಾಗಿ ತೀರಾ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ಶಾಸಕ ಕೆ ರಘುಪತಿ ಭಟ್ ನೇತೃತ್ವದಲ್ಲಿ 3 ಜಿಲ್ಲೆಗಳ ಶಾಸಕರ ನಿಯೋಗವು ಸೆಪ್ಟಂಬರ್ 14 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು […]
ಕೇರಳ ಮಾದರಿ ಕರ್ನಾಟಕದಲ್ಲೂ ರಬ್ಬರಿಗೆ ಬೆಂಬಲ ಬೆಲೆ ಘೋಷಿಸಿ: ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೋ ಮನವಿ
ಮಂಗಳೂರು: ಕರ್ನಾಟಕ ಸರಕಾರವು ಕೇರಳ ಸರಕಾರದ ಮಾದರಿಯಲ್ಲೇ ರಬ್ಬರಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೋ ಮನವಿ ಮಾಡಿದೆ. ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಹೆಚ್ಚಿನ ರೈತರು ತಮ್ಮ ಜೀವನಾಧಾರಕ್ಕೆ ಅಡಿಕೆಯೊಂದಿಗೆ ರಬ್ಬರ್ ಕೃಷಿಯನ್ನು ಅವಲಂಬಿಸಿದ್ದಾರೆ. ರಬ್ಬರಿನ ಪರ್ಯಾಯ ಕೃಷಿಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ. ಇತ್ತೀಚಿನ ರಬ್ಬರ್ ಮಾರುಕಟ್ಟೆಯಲ್ಲಿ ಉಂಟಾದ ದರ ಕುಸಿತವು ಕೃಷಿಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪರಿಹಾರವಿಲ್ಲದೆ ರಬ್ಬರ್ ಮರಗಳನ್ನು ಕಡಿಯುವ ನಿರ್ಧಾರ ಮಾಡಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. […]