ನೆರೆ ಪರಿಹಾರ ಕಾರ್ಯಗಳಿಗೆ 50 ಕೋಟಿ ರೂ. ಬಿಡುಗಡೆ: ಸಿಎಂ ಯಡಿಯೂರಪ್ಪ
ಉಡುಪಿ: ರಾಜ್ಯದ ನೆರೆ ಪೀಡಿತ ಜಿಲ್ಲೆಗಳಲ್ಲಿ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು 50 ಕೋಟಿ ರೂ. ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿದ ಅವರು, ಪ್ರವಾಹ ಸ್ಥಿತಿ ಇರುವ ಪ್ರದೇಶಗಳಲ್ಲಿ ತಕ್ಷಣ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹೇಳಿದ್ದೇನೆ. ಅಗತ್ಯಬಿದ್ದರೆ ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಹಣ ನೀಡುವುದಾಗಿ ಭರವಸೆ ನೀಡಿದ್ದೇನೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ […]