ಮರವಂತೆಯಲ್ಲಿ ಹಾನಿಗೊಳಗಾದ ರಸ್ತೆ ನಿರ್ಮಾಣಕ್ಕೆ 3 ಕೋಟಿ ರೂ ತಕ್ಷಣ ಬಿಡುಗಡೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಉಡುಪಿ ಜೂ.19: ಉಡುಪಿ ಜಿಲ್ಲೆಯಲ್ಲಿ ತೌಖ್ತೆ ಚಂಡಮಾರುತದಿAದ ಸಮುದ್ರ ಕೊರೆತ ಉಂಟಾಗಿ ಹಾನಿಗೊಳಗಾದ ಬೈಂದೂರು ತಾಲೂಕು ಮರವಂತೆಯ 1.5 ಕಿಮೀ ರಸ್ತೆಯ ಮರು ನಿರ್ಮಾಣಕ್ಕೆ ತಕ್ಷಣವೇ 3 ಕೋಟಿ ರೂ ಗಳನ್ನು ಬಿಡುಗಡೆಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.   ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾ ದಿಂದ , ರಾಜ್ಯದ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು , ಸಂಬoದಿಸಿದ […]