ದಿ ಕೇರಳ ಸ್ಟೋರಿ: ಬಂಗಾಳದಲ್ಲಿ ನಿಷೇಧ; ಉತ್ತರ ಪ್ರದೇಶದಲ್ಲಿ ತೆರಿಗೆ ಮುಕ್ತ

ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಘೋಷಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಚಲನಚಿತ್ರವನ್ನು ನಿಷೇಧಿಸಿದ ಒಂದು ದಿನದ ನಂತರ ಆದಿತ್ಯನಾಥ್ ಅವರ ಘೋಷಣೆ ಹೊರಬಿದ್ದಿದೆ. ‘ದಿ ಕೇರಳ ಸ್ಟೋರಿ’ಯನ್ನು ನಿಷೇಧಿಸುವ ನಿರ್ಧಾರವನ್ನು ಪಶ್ಚಿಮ ಬಂಗಾಳ ಸರ್ಕಾರ ಸೋಮವಾರ ಪ್ರಕಟಿಸಿದೆ. ರಾಜ್ಯದಲ್ಲಿ ಪ್ರದರ್ಶನಗೊಳ್ಳುತ್ತಿರುವ ಪರದೆಗಳಿಂದ ಚಲನಚಿತ್ರವನ್ನು ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಮಮತಾ ಬ್ಯಾನರ್ಜಿ ನಿರ್ದೇಶನ ನೀಡಿದ್ದಾರೆ. “ಬಂಗಾಳದಲ್ಲಿ ಶಾಂತಿ […]