ಸಿಎಂ ಸಿದ್ದರಾಮಯ್ಯ: ನಾಡಹಬ್ಬದ ಮಹತ್ವ ಕಡಿಮೆಯಾಗಬಾರದೆಂದು ಸಾಂಪ್ರದಾಯಿಕ ದಸರಾ ಆಚರಣೆ

ಮೈಸೂರು: ಇಂದು ದಸರಾ ಮಹೋತ್ಸವಕ್ಕೆ ವಿದ್ಯುಕ್ತ​ ಚಾಲನೆ ನೀಡಲಾಗಿದೆ. ಬಳಿಕ ಸಿಎಂ ಸಿದ್ದರಾಮಯ್ಯ ಈ ಬಾರಿಯ ಸಾಂಪ್ರದಾಯಿಕ ದಸರಾ ಆಚರಣೆ ಕುರಿತು ಮಾತನಾಡಿದರು. ಬರಗಾಲದ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿ ದಸರಾ ಆಚರಿಸುತ್ತಿಲ್ಲ. ಆದ್ರೆ ದಸರಾ ಮಹತ್ವಕ್ಕೆ ಯಾವುದೇ ಕುಂದು ಉಂಟಾಗದಂತೆ ಸಾಂಪ್ರದಾಯಿಕವಾಗಿ ನಾಡಹಬ್ಬವನ್ನು ಸರ್ಕಾರ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಂದುವರೆದು, ನಾವು ದಸರಾ ಹಬ್ಬವನ್ನು ನವರಾತ್ರಿ ಹಬ್ಬ ಎಂದು ಕರೆಯುತ್ತೇವೆ. 10ನೆಯ ದಿನ ಜಂಬೂ ಸವಾರಿ ನಡೆಯುತ್ತದೆ. ದಸರಾ ಹಬ್ಬ ವಿಜಯನಗರ ಸಾಮ್ರಾಜ್ಯದ […]