ಗ್ಯಾರಂಟಿ ಸಮಾವೇಶ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ; ಫಲಾನುಭವಿಗಳಿಗೆ ಸವಲತ್ತು ವಿತರಣೆ

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಜಿಲ್ಲಾಡಳಿತ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತು ವಿತರಿಸಿದರು.

ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ: ಸಭಾತ್ಯಾಗ ನಡೆಸಿದ ಬಿಜೆಪಿ; ಪಾಕ್ ಪರ ಘೋಷಣೆ ವಿರುದ್ದ ಪ್ರತಿಭಟನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಧರಣಿ ನಡೆಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸದನ ಆರಂಭ ಆಗುತ್ತಿದ್ದಂತೆಯೆ ಬಾವಿಗೆ ಇಳಿದು ಧರಣಿ ನಡೆಸಿದ ಬಿಜೆಪಿ ಸದಸ್ಯರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಜೈಶ್ರೀರಾಂ, ಮೋದಿ ಮೋದಿ ಎಂದು ಘೋಷಣೆ ಕೂಗಿದರು. ಸಿಎಂ ಉತ್ತರಕ್ಕೆ ವಿರೋಧ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿಎಂ ರಾಜೀನಾಮೆ ಕೊಡಬೇಕು. ಇದು ಹಿಂದೂ ವಿರೋಧಿ […]

ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತನೇ ತರಗತಿ, ಪಿಯುಸಿ, ಪದವಿ, ಎಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗಾಕಾಂಕ್ಷಿಗಳಿಗಾಗಿ ಏರ್ಪಡಿಸಲಾಗಿರುವ ಉದ್ಯೋಗ ಮೇಳದಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸೋಮವಾರದಿಂದ ಆರಂಭವಾಗಿರುವ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಕೊಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಲ್ಲೊಂದಾಗಿತ್ತು. ಉದ್ಯೋಗದ […]

ದೇವಸ್ಥಾನಗಳ ಆದಾಯದ ಶೇ 10ರಷ್ಟು ಸರ್ಕಾರಕ್ಕೆ ಸಲ್ಲಿಕೆ; ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದೂಯೇತರರ ನೇಮಕ: ಬಿಜೆಪಿ ಕೆಂಡಾಮಂಡಲ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಬುಧವಾರ ವಿಧಾನಸಭೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕ(ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ. 1 ಕೋಟಿಗೂ ಹೆಚ್ಚು ಆದಾಯವಿರುವ ದೇವಸ್ಥಾನಗಳ ಆದಾಯದ ಶೇ 10ರಷ್ಟು ಹಣವನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಮಸೂದೆಯಲ್ಲಿ ಕಡ್ಡಾಯಗೊಳಿಸಲಾಗಿದೆ. ಈ ಮಸೂದೆಯ ಬಗ್ಗೆ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವನ್ನು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ. ರಾಜ್ಯ ಸರ್ಕಾರವು “ಹಿಂದೂ ವಿರೋಧಿ ನೀತಿಗಳಲ್ಲಿ” ತೊಡಗಿಸಿಕೊಂಡಿದೆ ಮತ್ತು ಹಣದ ದುರುಪಯೋಗವಾಗುವುದು ನಿಶ್ಚಿತ ಎಂದು ಆರೋಪಿಸಿದೆ. ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ […]

ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸಾರಿಗೆ ನೌಕರರಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು: ಇಲ್ಲಿನ ಫ್ರೀಡಂಪಾರ್ಕ್‌ನಲ್ಲಿ ಸಾರಿಗೆ ನೌಕರರು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಬೆಳಗ್ಗೆ 10:30 ರಿಂದ 5 ಗಂಟೆಯವರೆಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ಸಾರಿಗೆ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಹೊಸ ಒಪ್ಪಂದದ ಪ್ರಕಾರ ಜನವರಿ 1 ರಿಂದ ಸಾರಿಗೆ ನೌಕರರ ವೇತನ ಪರಿಷ್ಕರಣೆ ಆಗಬೇಕು. ಆದರೆ, ವೇತನ ಸುಧಾರಣೆಯ ಪ್ರಶ್ನೆಯನ್ನು ಸಾರಿಗೆ ಸಂಸ್ಥೆಗಳು ಇನ್ನೂ ಚರ್ಚಿಸಿಲ್ಲ. ಹೀಗಾಗಿ ವೇತನ ಪರಿಷ್ಕರಣೆ ಸೇರಿದಂತೆ ನಾನಾ […]