15ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ: ಪ್ರವಾಸೋದ್ಯಮ, ಕೃಷಿ ಮಹಿಳೆಯರ ಸಬಲೀಕರಣ, ಶಿಕ್ಷಣ, ಆರೋಗ್ಯ; ಯಾವ ಇಲಾಖೆಗೆ ಎಷ್ಟು ಅನುದಾನ?
ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. 15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಸತತ 3 ಗಂಟೆ 15 ನಿಮಿಷ ಬಜೆಟ್ ಪ್ರತಿಯನ್ನು ಓದಿ ಮುಕ್ತಾಯಗೊಳಿಸಿದ್ದಾರೆ. ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ […]
ಕೇಂದ್ರದ ವಿರುದ್ದ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ದ ರಾಜಧಾನಿಯಲ್ಲಿ ಬಿಜೆಪಿ ಪ್ರತಿಭಟನೆ
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ವ್ಯಯಿಸುತ್ತಿದೆ. ರಾಜ್ಯದ ಬರ ಪರಿಸ್ಥಿತಿಗೆ ಸ್ಪಂದಿಸದೇ ಇರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಶಾಸಕರು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ದೆಹಲಿಯಲ್ಲಿ ಸಿದ್ದರಾಮಯ್ಯ ಸರ್ಕಾರ ಪ್ರತಿಭಟನೆ ಶುರುಮಾಡುವ 11 ಗಂಟೆ ಹೊತ್ತಿಗೆ ಬೆಂಗಳೂರಿನಲ್ಲಿ ವಿಧಾನಸೌಧದ ಆವರಣದಲ್ಲಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ ನಡೆಯಲಿದೆ. “ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ […]
ಕೋವಿಡ್ ಎದುರಿಸಲು ಸರಕಾರ ಸನ್ನದ್ಧ, ಆತಂಕ ಬೇಡ ಎಚ್ಚರಿಕೆ ಬೇಕು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೋವಿಡ್ ಹೊಸ ಉಪತಳಿಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಆದರೆ ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು. ಈಗಿನ ಉಪತಳಿ JN.1 ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು […]
ರಾಜ್ಯದಲ್ಲಿ ಹೆಚ್ಚುವರಿ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸರ್ಕಾರದ ಅನುಮೋದನೆ
ಬೆಳಗಾವಿ: ರಾಜ್ಯದಲ್ಲಿ ಹೆಚ್ಚುವರಿಯಾಗಿ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್ಕಾನ್ ಪ್ರಸ್ತಾವನೆಯನ್ನು ಸರ್ಕಾರವು ಅನುಮೋದಿಸಿದೆ. ಸೆಮಿ ಕಂಡಕ್ಟರ್ ಕ್ಷೇತ್ರದ ದೈತ್ಯ ಸಂಸ್ಥೆಯಾಗಿರುವ ಫಾಕ್ಸ್ಕಾನ್, ಈಗಾಗಲೇ ರಾಜ್ಯದಲ್ಲಿ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ […]
ಬಂಟರ ಅಭಿವೃದ್ದಿ ನಿಗಮ ಸ್ಥಾಪನೆ ಬಗ್ಗೆ ಮುಂದಿನ ಬಜೆಟ್ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಉಡುಪಿ: “ನಿಕ್ಲೆಗ್ ಎನ್ನ ನಮಸ್ಕಾರ. ಎಂಚ ಉಲ್ಲರ್?” ಎಂದು ತುಳುವಿನಲ್ಲಿ ಮಾತನ್ನು ಶುರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮ್ಮೇಳನಕ್ಕೆ ಕರ್ನಾಟಕ ಸರ್ಕಾರ, ಮತ್ತು ರಾಜ್ಯದ ಜನತೆಯ ಶುಭಾಶಯ ಕೋರಿದರು. ಬಂಟರ ಅಭಿವೃದ್ದಿ ನಿಗಮ ಮಾಡುವ ಭರವಸೆಯನ್ನು ಕರಾವಳಿ ಕರ್ನಾಟಕದ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡುತ್ತೇನೆ ಎಂದರು. ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ಬಂಟರ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂತೋಷದಿಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾಗವಹಿಸಿದ್ದೇನೆ. ಬಂಟರು ಪ್ರಾಚೀನ ಕಾಲದಿಂದಲೂ […]