ಹೊಸ ಸರ್ಕಾರದ ‘ಕಾರು’ ಬಾರು: 33 ಸಚಿವರಿಗೆ ಹೊಸ ಇನ್ನೋವಾ ಹೈಕ್ರಾಸ್ ಹೈಬ್ರಿಡ್ ಎಸ್‌ಯುವಿ ಖರೀದಿಸಲು 10 ಕೋಟಿ ಖರ್ಚು

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 33 ಟೊಯೊಟಾ ಇನ್ನೋವಾ ಹೈಕ್ರಾಸ್ ಹೈಬ್ರಿಡ್ ಎಸ್‌ಯುವಿಗಳನ್ನು ಖರೀದಿಸಲಿದೆ ಎಂದು ವರದಿಯಾಗಿದೆ. 33 ಸಚಿವರಿಗೆ ತಲಾ ಒಂದು ಗಾಡಿಯಂತೆ 9.9 ಕೋಟಿ ರೂ ಬಜೆಟ್ ಅನ್ನು ನಿಗದಿಪಡಿಸಲಾಗಿದೆ. ಈ ನೇರ ಖರೀದಿಗೆ ಅನುಕೂಲವಾಗುವಂತೆ, ಕರ್ನಾಟಕ ಟ್ರಾನ್ಸ್ಪೆರೆನ್ಸಿ ಪಬ್ಲಿಕ್ ಪ್ರೊಕ್ಯೂರ್ ಮೆಂಟ್ (ಕೆಟಿಪಿಪಿ) ಕಾಯಿದೆಯಡಿಯಲ್ಲಿ 4(ಜಿ) ವಿನಾಯಿತಿಯನ್ನು ನೀಡಲಾಗಿದ್ದು, ಇದು ಟೆಂಡರ್‌ಗಳಿಲ್ಲದೆ ಗುತ್ತಿಗೆಗಳನ್ನು ನೀಡಲು ಸಹಾಯಮಾಡುತ್ತದೆ. ನೂತನ ಸಚಿವರಿಗಾಗಿ ಅತ್ಯಾಧುನಿಕ ಎಸ್ ಯುವಿಗಳಿಗೆ ಇಷ್ಟು ದೊಡ್ಡ ಮೊತ್ತವನ್ನು ವ್ಯಯಿಸಿರುವುದು ಕೆಲವೆಡೆ ಟೀಕೆಗೆ […]

ಗ್ರಾಮೀಣ ಬ್ಯಾಂಕ್ ಗಳಿಂದ ಸಾಲ ಪಡೆದ ರೈತರ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಳ್ಳಾರಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್‌ ಹಾಗೂ ಪ್ರವರ್ತಕ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ ಹಾಗೂ ದರ್ಶನ್‌ ಪುಟ್ಟಣ್ಣಯ್ಯ […]

ರಾಜ್ಯ ರಾಜಧಾನಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಸಿದ್ದರಾಮಯ್ಯನವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಮೊದಲ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನು ಮಾಡಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಜನಜೀವನದ ಗುಣಮಟ್ಟ ಹೆಚ್ಚಿಸಲು ಸರ್ಕಾರ ನೀಡುತ್ತಿರುವ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ಸರ್ಕಾರದ ಕಲ್ಯಾಣ ಯೋಜನೆಗಳು ಸಮಯಾತೀತವಾಗಿವೆ ಮತ್ತು ಅವು ಜನರ ಜೀವನ ಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿವೆ. […]

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು. ಸಿದ್ದರಾಮಯ್ಯ ಅವರು ಮರದಲ್ಲಿ ತಯಾರಿಸಿದ ಆನೆಯ ವಿಗ್ರಹ ಮತ್ತು ಹಾರವನ್ನು ಪ್ರಧಾನಿ ಮೋದಿ ಅವರಿಗೆ ನೀಡಿದರು. ಪಿಎಂಒ ಟ್ವೀಟ್ ಮಾಡಿರುವ ಚಿತ್ರದಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕದ ಸಾಂಪ್ರದಾಯಿಕ ಪೇಟ ಮತ್ತು ಶಾಲನ್ನು ತೊಟ್ಟಿದ್ದಾರೆ. ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ […]

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯನ್ನು 1 ನೇ ಸ್ಥಾನಕ್ಕೇರಿಸಲು ಅಧಿಕಾರಿಗಳು ಶ್ರಮವಹಿಸಿ: ಸಿಎಂ ಸಿದ್ದರಾಮಯ್ಯ

ಉಡುಪಿ: ಜಿಲ್ಲೆಯ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವುದು ಆರೋಗ್ಯ ಇಲಾಖೆಯ ಆದ್ಯ ಕರ್ತವ್ಯಗಳಲ್ಲಿ ಒಂದಾಗಿದೆ. ಪ್ರಸ್ತುತ ಜಿಲ್ಲೆಯು ಆರೋಗ್ಯ ಸೇವೆ ಸೂಚ್ಯಂಕದಲ್ಲಿ 18ನೇ ಸ್ಥಾನದಲ್ಲಿದೆ. ಆದರೆ 2015 ನೇ ಸಾಲಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಯು ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿತ್ತು. ಇದು ಅಧಿಕಾರಿಗಳ ಉದಾಸೀನತೆಯನ್ನು ತೋರುತ್ತದೆ. ಮತ್ತೊಮ್ಮೆ ಜಿಲ್ಲೆಯನ್ನು 1 ನೇ ಸ್ಥಾನಕ್ಕೆ ತರಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಶ್ರಮವಹಿಸಿ, ಕೆಲಸ ಮಾಡಬೇಕು. ಆರೋಗ್ಯ ಸಿಬ್ಬಂದಿಗಳು ಜನರಿಗೆ ಉತ್ತಮ ಸೇವೆಗಳನ್ನು ಒದಗಿಸದಿದ್ದಲ್ಲಿ ಮರಣ ಹೊಂದುವವರ ಸಂಖ್ಯೆ […]