ನಾಳೆ (ಆ.1) ಸಿಎಂ ಸಿದ್ದರಾಮಯ್ಯ ಉಡುಪಿಗೆ: ಭರ್ಜರಿ ಸ್ವಾಗತಕ್ಕೆ ಕಾಂಗ್ರೆಸ್ ಸಜ್ಜು

ಉಡುಪಿ: ನಾಳೆ ಸಿಎಂ ಸಿದ್ದರಾಮಯ್ಯ ಅವರು ದ.ಕ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಹೆಜಮಾಡಿ ಟೋಲ್ ಗೇಟ್ ಬಳಿ ಉಡುಪಿ ಜಿಲ್ಲಾ ಕಾಂಗ್ರೆಸ್ ಭರ್ಜರಿಯಾಗಿ ಸ್ವಾಗತಿಸಲಿದೆ. ಜಿಲ್ಲೆಯ ಕಾಂಗ್ರೆಸ್ ಪದಾಧಿಕಾರಿಗಳು, ನಾಯಕರು, ಬ್ಲಾಕ್ ಅಧ್ಯಕ್ಷರು, ಎಲ್ಲ ಘಟಕಗಳ ಅಧ್ಯಕ್ಷರು ಸಮಿತಿ ಸದಸ್ಯರು, ಹಾಗೂ ಕಾರ್ಯಕರ್ತರು ಹಾಜರಿದ್ದು, ಬೆಳಿಗ್ಗೆ 11 ಗಂಟೆಗೆ ಹೆಜಮಾಡಿ ಟೋಲ್ ಗೇಟ್ ಬಳಿ ಉಪಸ್ಥಿತರಿರಲು ಸೂಚಿಸಲಾಗಿದೆ. ನಾಳೆ ಮಧ್ಯಾಹ್ನ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿರುವ ಸಿಎಂ, ಬಳಿಕ […]

ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ ಯೋಜನೆ ಪುನರಾರಂಭ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶಾಲಾ ಮಕ್ಕಳಿಗೆ ಬೈಸಿಕಲ್‌ ವಿತರಣೆ ಯೋಜನೆಗೆ ಮರು ಚಾಲನೆ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಕುರಿತು ಮತನಾಡಿದ ಸಿಎಂ, ಶಾಲಾ ಮಕ್ಕಳ ಸೈಕಲ್‌ ವಿತರಣೆ ಯೋಜನೆ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, ಯೋಜನೆ ಪುನಾರಂಭಿಸುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. 2006-07ರಲ್ಲಿ ಆರಂಭಗೊಂಡ ಈ ಯೋಜನೆಯಡಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ಸರಕಾರಿ ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ಉಚಿತವಾಗಿ ಸೈಕಲ್‌ಗ‌ಳನ್ನು […]

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹಿಂದೂಗಳ ಅಮಾನುಷ ಹತ್ಯೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಲೆ ಗಡುಕರಿಗೆ, ಭಯೋತ್ಪಾದಕರಿಗೆ ಬಲ ನೀಡಿದಂತೆ ಎಂಬುದಕ್ಕೆ ಕಾಂಗ್ರೆಸ್ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ರಾಜ್ಯದಲ್ಲಿ ಜೈನ ಮುನಿ ಮತ್ತು ಹಿಂದೂ ಕಾರ್ಯಕರ್ತನ ಅಮಾನುಷ ಹತ್ಯೆ ನಡೆದಿರುವುದು ಜ್ವಲಂತ ನಿದರ್ಶನವಾಗಿದೆ. ಹಂತಕರಿಗೆ ಕಾನೂನಿನ ಭಯವಿಲ್ಲದೆ ಇಂತಹ ಭೀಕರ ಕೊಲೆಗಳು ನಿರಂತರ ನಡೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ‌ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ್ […]

ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಣೆ ಕೇಂದ್ರ ಸರ್ಕಾರದ ಕೊಳಕು ರಾಜಕೀಯಕ್ಕೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ನಿಲ್ಲಿಸುವ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ, ಕೆಜಿಗೆ 34 ರೂ ನಮ್ಮಿಂದ ತಗೊಳ್ಳುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನ ಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ […]

ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್ ಗಳ ಪೈಕಿ ಶ್ರೇಷ್ಠ ಬಜೆಟ್: ರಮಾನಾಥ ರೈ

ಬಂಟ್ವಾಳ: ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ ಎಂದು ರಮಾನಾಥ್ ರೈ ಹೇಳಿದ್ದಾರೆ. ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ ಆಗಿದ್ದು, ಸಮಾಜ ಸ್ನೇಹಿ, ಮಹಿಳಾ […]